ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ಏಪ್ರಿಲ್ 5 ಮತ್ತು 6 ರಂದು ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಏಪ್ರಿಲ್ 5 ರಂದು ಮಧ್ಯಾಹ್ನ 12:30 ಗಂಟೆಗೆ ಮಂಡ್ಯ ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಡಾ. ಬಾಬು ಜಗಜೀವನರಾಂರವರ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3:00 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಸಂಜೆ 6 ಗಂಟೆಗೆ ಮೈಸೂರು ತಲುಪಲಿರುವ ಅವರು ಮೈಸೂರಿನ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಏಪ್ರಿಲ್ 6 ರಂದು ಬೆಳಿಗ್ಗೆ 10:00 ಗಂಟೆಗೆ ಶ್ರೀರಂಗಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್ ಸಮುದಾಯ ಭವನದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12:00 ಗಂಟೆಗೆ ಪಾಂಡವಪುರದ ಟಿ.ಎ.ಪಿ.ಸಿ.ಎಂ.ಎಸ್ ಸಮುದಾಯ ಭವನದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2:30 ಗಂಟೆಗೆ ಕೆ.ಆರ್.ಪೇಟೆಯ ಜಯಮ್ಮ ಶಿವಲಿಂಗೇಗೌಡ ಕಲ್ಯಾಣ ಮಂಟಪದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 5:30 ಗಂಟೆಗೆ ನಾಗಮಂಗಲ, ಬೆಳ್ಳೂರು ಕ್ರಾಸ್, ಯಡಿಯೂರು, ಕುಣಿಗಲ್, ನೆಲಮಂಗಲ ಮಾರ್ಗವಾಗಿ ಕೇದ್ರಸ್ಥಾನ ಬೆಂಗಳೂರು ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಹೆಚ್.ಜಿ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




