Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಮಿಮ್ಸ್ ಗೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ : ಮೂಲಸೌಕರ್ಯ ಅಭಿವೃದ್ದಿಯ ಭರವಸೆ

ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಮಿಮ್ಸ್ (MIMS) ಗೆ ಭೇಟಿ ಕೊಟ್ಟ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಅಧೀನದ ಕಂಪನಿಗಳ ಸಿಎಸ್ ಆರ್ ಅನುದಾನದ ಅಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಇಂದು ಜಿಲ್ಲಾಧಿಕಾರಿ,ಸಿಇಓಅವರ ಜೊತೆ ಮಿಮ್ಸ್ ಗೆ ಭೇಟಿ ಕೊಟ್ಟ ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ,ಜಿಲ್ಲಾಧಿಕಾರಿ ಡಾ.ಕುಮಾರ,ಜಿ.ಪಂ.ಸಿಇಒ ನಂದಿನಿ,ಮಿಮ್ಸ್ ನಿರ್ದೇಶಕ ನರಸಿಂಹಸ್ವಾಮಿ ಜೊತೆ ಚರ್ಚೆ ನಡೆಸಿದರು.

ಆಸ್ಪತ್ರೆಗೆ 3 ಕೋಟಿ ರೂ ಸಿಎಸ್ ಆರ್ ಅನುದಾನದಲ್ಲಿ ಹೊಸ ಶೌಚಾಲಯ ನಿರ್ಮಾಣ, ಮಕ್ಕಳ ಘಟಕ ನವೀಕರಣ, ಹೊಸ ಲಿಫ್ಟ್ ಅಳವಡಿಕೆ, ಹೊಸ ಕಿಟಕಿ ಬಾಗಿಲು ಅಳವಡಿಕೆ, ಕಟ್ಟಡಕ್ಕೆ ಬಣ್ಣ ಸೇರಿ ಮತ್ತು ಇನ್ನಿತರೆ ಕಾಮಗಾರಿಗಳ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಹಾಗೂ ಉಕ್ಕು ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಉಕ್ಕು ಪ್ರಾಧಿಕಾರ (SAIL), ಭಾರತೀಯ ಖನಿಜಾಭಿವೃದ್ಧಿ ನಿಗಮ (NMDC) ಮಿಮ್ಸ್ ಗೆ ಸಿಎಸ್ ಆರ್ ನೆರವು ನೀಡಿವೆ. ಕ್ಯಾನ್ಸರ್ ಚಿಕಿತ್ಸಾ ಘಟಕದ ಉನ್ನತೀಕರಣಕ್ಕೂ ಅನುದಾನ ನೀಡುವುದಾಗಿ ಸಚಿವರು ಹೇಳಿದರು.

ಅಲ್ಲದೆ, ರೋಗಿಗಳಿಗೆ ಅನುಕೂಲ ಆಗುವಂತೆ ಮಿಮ್ಸ್ ನಲ್ಲಿ ಒಟ್ಟಾರೆ ಎಲ್ಲಾ ರೀತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ಕೊಡಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ‌ ಅನ್ನದಾನಿ, ಪಿಇಟಿ ಅಧ್ಯಕ್ಷ ವಿಜಯ್ ಆನಂದ್ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ