19 ವರ್ಷದ ಯುವತಿಯನ್ನು 7 ದಿನಗಳ ಕಾಲ 23 ಪಾಪಿಗಳು ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ..!. ಇಂತಹ ಘಟನೆ ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಕ್ಷೇತ್ರದಲ್ಲೇ ನಡೆಸಿದ್ದರೂ, ಮೋದಿ ಮೌನವಹಿಸಿರುವುದು ಸಮಾಜವೇ ತಲೆ ತಗ್ಗಿಸುವಂತಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದ್ದಾರೆ.
ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಯುವತಿಯರಿಗೆ, ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಉತ್ತರ ಪ್ರದೇಶದಲ್ಲಿ ಇಂತಹ ಭೀಭತ್ಸ ಘಟನೆಗಳು ಸಾಮನ್ಯದಂತಾಗಿದ್ದು, “ಗೋದಿ ಮಾಧ್ಯಮಗಳು” ಮೌನವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
19 ವರ್ಷದ ಯುವತಿಯನ್ನು 7 ದಿನಗಳ ಕಾಲ 23 ಪಾಪಿಗಳು ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ..!
ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಯುವತಿಯರಿಗೆ, ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಉತ್ತರ ಪ್ರದೇಶದಲ್ಲಿ ಇಂತಹ ಭೀಭತ್ಸ ಘಟನೆಗಳು ಸಾಮನ್ಯದಂತಾಗಿದ್ದು, “ಗೋದಿ ಮಾಧ್ಯಮಗಳು”… pic.twitter.com/VHkWScP4pI
— Hariprasad.B.K. (@HariprasadBK2) April 9, 2025
“>
ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಸುಪ್ರೀಂ ಕೋರ್ಟ್ ಎರಡು ದಿನಗಳ ಹಿಂದೆ ನ್ಯಾಯಾಧೀಶರಾದ ಸಂಜೀವ್ ಖನ್ನಾ ಅವರ ನೇತೃತ್ವದ ತ್ರಿಸದಸ್ಯ ಪೀಠ ಛೀಮಾರಿ ಹಾಕಿದೆ. ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದಲ್ಲೇ ದುಷ್ಕೃತ್ಯದ ನಡೆದಿದ್ದರೂ ಪ್ರಧಾನಿ ಮೌನವಹಿಸಿರುವುದು ಸಮಾಜವೇ ತಲೆ ತಗ್ಗಿಸುವಂತಿದೆ. ಕೂಡಲೇ ಸರ್ಕಾರ ಸಂತ್ರಸ್ಥೆಯ ನೆರವಿಗೆ ಧಾವಿಸಿ, ಅತ್ಯಾಚಾರ ಎಸೆಗಿರುವ ದುಷ್ಕರ್ಮಿಗಳಿಗೆ ಶಿಕ್ಷೆಗೊಳಪಡಿಸಲು ಒತ್ತಾಯಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.




