Wednesday, November 18, 2026

ಪ್ರಾಯೋಗಿಕ ಆವೃತ್ತಿ

ಪಾಂಡವಪುರ| ಕ್ಯಾತನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷರಾಗಿ ರಾಮಚಂದ್ರು ಆಯ್ಕೆ

ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ರೈತಸಂಘದ ಬೆಂಬಲಿತ ಅಭ್ಯರ್ಥಿ ಕೆ.ಎಸ್.ರಾಮಚಂದ್ರು ಅವಿರೋಧವಾಗಿ ಆಯ್ಕೆಯಾದರು.

ಒಟ್ಟು 20 ಸದಸ್ಯರ ಬಲವನ್ನು ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ಆಯ್ಕೆಯಾಗಿರುವ ಎಲ್ಲಾ ಸದಸ್ಯರು ರೈತಸಂಘದ ಬೆಂಬಲಿತ ಅಭ್ಯರ್ಥಿಗಳಾಗಿದ್ದಾರೆ. ರೈತ ಸಂಘದಲ್ಲಿನ ಅಧಿಕಾರ ಒಡಂಬಡಿಕೆ ಸೂತ್ರದನ್ವಯ ಈ ಹಿಂದಿನ ಉಪಾಧ್ಯಕ್ಷ ಕೆ.ಎಸ್.ರವಿಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಅವರಿಂದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು.

ಉಪಾಧ್ಯಕ್ಷ ಸ್ಥಾನಕ್ಕೆ ರೈತ ಸಂಘದ ಬೆಂಬಲಿತ ಅಭ್ಯರ್ಥಿ ಕೆ.ಎಸ್.ರಾಮಚಂದ್ರು ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಪಂಚಾಯತ್ ರಾಜ್ ಇಂಜನಿಯರಿಂಗ್ ಇಲಾಖೆ ಎಇಇ ರಮ್ಯ ಅವರು ನೂತನ ಉಪಾಧ್ಯಕ್ಷರಾಗಿ ಕೆ.ಎಸ್.ರಾಮಚಂದ್ರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಿಸಿದರು. ಈ ವೇಳೆ ರೈತ ಸಂಘದ ಮುಖಂಡರು ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ನೂತನ ಉಪಾಧ್ಯಕ್ಷ ರಾಮಚಂದ್ರು ಅವರು ನಮ್ಮ ನಾಯಕರಾದ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಮಾರ್ಗದರ್ಶನದಲ್ಲಿ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಸರ್ವೋದಯ ಕರ್ನಾಟಕ ಪಕ್ಷದ ಅಧ್ಯಕ್ಷ ಎಸ್.ದಯಾನಂದ ಮಾತನಾಡಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಕ್ಯಾತನಹಳ್ಳಿ ಗ್ರಾಮಕ್ಕೆ 4.5ಕೋಟಿ ರೂ. ಅನುದಾನ ನೀಡಿದ್ದಾರೆ. ಶೀಘ್ರದಲ್ಲೇ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನಡೆಯಲಿದ್ದು, ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ಸಿದ್ದಾಚಾ‌ರ್, ಮಾಜಿ ಅಧ್ಯಕ್ಷೆ ಆಯೀಷಾ , ಮಾಜಿ ಉಪಾಧ್ಯಕ್ಷ ನಯನ (ಸಂತೋಷ್), ಕೆ.ಎಸ್.ರವಿಕುಮಾ‌ರ್, ಸದಸ್ಯರಾದ ಮನೋಹರ್, ವಿನಾಯಕ, ಚಿದಾನಂದ, ಯಮುನಾ, ಅನಿತಾ, ಸರ್ವೋದಯ ಕರ್ನಾಟಕ ಪಕ್ಷದ ಅಧ್ಯಕ್ಷ ಎಸ್.ದಯಾನಂದ, ರೈತಸಂಘದ ಕ್ಯಾತನಹಳ್ಳಿ ಘಟಕದ ಅಧ್ಯಕ್ಷ ರವಿಕುಮಾರ್, ರೈತಸಂಘದ ಮುಖಂಡರಾದ ಕೆ.ಕೆ.ಗೌಡೇಗೌಡ, ಕೆ.ಪಿ.ಮಹದೇವೇಗೌಡ, ಕೆ.ಸಿ.ನಾಗೇಶ್, ಯುವರಾಜು, ನಾರಾಯಣಗೌಡ, ಪಿ.ಶಂಕರ್, ಪಿಡಿಒ ಸಂಗಮೇಶ್ ಚೌಹಣ್, ಗ್ರಾ.ಪಂ ನಿವೃತ್ತ ನೌಕರ ಕೆ.ಮೋಹನ್ ಸೇರಿದಂತೆ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ