Wednesday, November 18, 2026

ಪ್ರಾಯೋಗಿಕ ಆವೃತ್ತಿ

ಪಿಯು ಫಲಿತಾಂಶ: ಮಾಂಡವ್ಯ ಇಂಟಿಗ್ರೇಟೆಡ್ ಕಾಲೇಜು ಉತ್ತಮ ಸಾಧನೆ

ಮಂಡ್ಯ ನೆಹರು ನಗರದ (ಸರ್ಕಾರಿ ಆಸ್ಪತ್ರೆ ಹಿಂಭಾಗ) ಮಾಂಡವ್ಯ ಇಂಟಿಗ್ರೇಟೆಡ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೃಷ್ಣವೇಣಿ ಎಸ್. ಎಲ್ ರವರು 587 ಅಂಕಗಳನ್ನು ಪಡೆದು ರಾಜ್ಯಕ್ಕೆ 12ನೇ ಸ್ಥಾನ ಮತ್ತು ಜಿಲ್ಲೆಗೆ 4 ನೇ ಸ್ಥಾನ ಪಡೆದಿದ್ದಾರೆ.

ದ್ವಿತೀಯ – ಸಹನಾ ಕೆ ವಿ-570, ತೃತೀಯ ಸ್ಥಾನವನ್ನು ಮೌಲ್ಯ ಪಿ -568 ಪಡೆದಿದ್ದು 22 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ 78 ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆಯುವುದರ ಜೊತೆಗೆ ಗಣಿತಶಾಸ್ತ್ರ ವಿಷಯದಲ್ಲಿ ನೂರಕ್ಕೆ ನೂರು ಅಂಕವನ್ನು ಕೃಷ್ಣವೇಣಿ ಎಸ್ ಎಲ್ ಮತ್ತು ಮೌಲ್ಯ. ಪಿ ಪಡೆದಿದ್ದಾರೆ.

ಕನ್ನಡ, ಇಂಗ್ಲಿಷ್, ಗಣಕ ವಿಜ್ಞಾನ ಮತ್ತು ಸಂಖ್ಯಾಶಾಸ್ತ್ರ ವಿಷಯದಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿದೆ. ಅತ್ಯುನ್ನತ ಫಲಿತಾಂಶ ನೀಡಿರುವ ವಿದ್ಯಾರ್ಥಿಗಳನ್ನು ಮತ್ತು ಉಪನ್ಯಾಸಕರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಬಿ ಶಿವಲಿಂಗಯ್ಯ ಮತ್ತು ಕಾರ್ಯದರ್ಶಿ ಡಾ. ಮೀರಾ ಶಿವಲಿಂಗಯ್ಯ ಹಾಗೂ ಶೈಕ್ಷಣಿಕ ಪಾಲುದಾರರಾದ ಅವಿನಾಶ್ ಎಂ ಮಾರಗೌಡನಹಳ್ಳಿ, ಡಾ.ಮೋಹನ್ ಎಂ.ಪಿ ಮತ್ತು ರಾಘವೇಂದ್ರ ಡಿ.ಎಸ್ ಹಾಗೂ ಪ್ರಾಂಶುಪಾಲರಾದ ಚಂದ್ರಶೇಖರ್ ಕೆ.ಕೆ, ಬೋಧಕ ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ