ಮಂಡ್ಯ ತಾಲೂಕು ದುದ್ದ ಹೋಬಳಿ ಜವರೇಗೌಡನಕೊಪ್ಪಲು ಗ್ರಾಮದಲ್ಲಿ ಕೃಷಿ ಇಲಾಖೆ ಮಂಡ್ಯ ವತಿಯಿಂದ ಕೃಷಿ ಯಾಂತ್ರೀಕರಣ ಯೋಜನೆಯಡಿ ಮೇವು ಕತ್ತರಿಸುವ ಯಂತ್ರ ಮತ್ತು ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳನ್ನು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಿತರಣೆ ಮಾಡಿದರು.
ಈ ವೇಳೆ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ ರೈತರು ಖುಷ್ಕಿ ಬೇಸಾಯದಲ್ಲಿ ಏಕ ಬೆಳೆ ಪದ್ಧತಿ ಬಿಟ್ಟು ಸಮಗ್ರ ಕೃಷಿ ಪದ್ಧತಿಗಳನ್ನು ಅನುಸರಿಸಿದರೆ ಹೆಚ್ಚಿನ ಲಾಭಗಳಿಸಿ ಸದೃಢರಾಗಬಹುದು. ರೈತರು ಕೃಷಿ ಇಲಾಖೆ ಮತ್ತು ಎಲ್ಲಾ ಇಲಾಖೆಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆಸಿಕೊಳ್ಳಲು ಕರೆ ನೀಡಿದರು.
ಸಹಾಯಕ ಕೃಷಿ ನಿರ್ದೇಶಕರಾದ ಸುನಿತಾ ಮಾತನಾಡಿ ಕೃಷಿ ಇಲಾಖೆಯಲ್ಲಿ ಕೃಷಿಯಾಂತೀಕರಣ ಸೂಕ್ಷ್ಮ ನೀರಾವರಿ ಯೋಜನೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಹಾಗೂ ಇತರೆ ಯೋಜನೆಗಳಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ರವಿ ಬೋಜೇಗೌಡ, ಚಂದ್ರು, ಮಹೇಂದ್ರ, ಕುಳ್ಳಂಬಯ್ಯ, ಸಿದ್ದೇಗೌಡ, ,ನಾಗರಾಜು ಜೆ ಬಿ, ಮಹಾದೇವ, ತಮ್ಮಣ್ಣ, ಸವಿತಾ, ಆನಂದ, ಅಧಿಕಾರಿಗಳಾದ ಹರ್ಷ, ಗಂಗನರಸಿಂಹಯ್ಯ ಇತರರಿದ್ದರು.




