Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕೇಂದ್ರದ ಬೆಲೆ ಏರಿಕೆ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಸೌದೆ ಒಲೆ ಉರಿಸಿ ಆಕ್ರೋಶ

ಕೇಂದ್ರ ಸರ್ಕಾರವು ಪೆಟ್ರೋಲ್‌, ಡೀಸೆಲ್,ಅಡುಗೆ ಅನಿಲ ದರ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನೆಡೆಸಿದರು.

ಮಂಡ್ಯ ನಗರದ ಜೆಸಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಕಾರರು, ತಲೆ ಮೇಲೆ ಗ್ಯಾಸ್ ಸಿಲಿಂಡರ್‌ ಗಳನ್ನು ಹೊತ್ತರು. ರಸ್ತೆಯಲ್ಲೇ ಸೌದೆ ಒಲೆ ಉರಿಸಿ ಆಕ್ರೋಶ ವ್ಯಕ್ತಪಡಿಸಿದರು

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಂದ್ರ ಕುಮಾರ್ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಬಡವರ ರಕ್ತ ಹೀರುತ್ತಿದೆ.ಇದರ ಬಗ್ಗೆ ಹೋರಾಡ ಬೇಕಾದ ರಾಜ್ಯ ಬಿಜೆಪಿಯು,ಕಾಂಗ್ರೆಸ್‌ ವಿರುದ್ಧ ಜನಾಕ್ರೋಶಯಾತ್ರೆ ಮಾಡುತ್ತಿ ರುವುದು ಹಾಸ್ಯಾಸ್ಪದವಾಗಿದೆ.
ಇದು ಜನರ ಹಾದಿ ತಪ್ಪಿಸುವ ತಂತ್ರ ಎಂದು ಟೀಕಿಸಿದರು.

ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ರೂ.2 ಹಾಗೂ ಅಡುಗೆ ಅನಿಲದ ದರವನ್ನು ರೂ.50 ಏರಿಸಿದೆ.ಬಿಜೆಪಿ ಕಾರ್ಯ ಕರ್ತರು ಸಮರ್ಥಿಸುತ್ತಿರುವುದು ವಿಷಾದನೀಯ ಎಂದರು.

ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ.ನಮ್ಮ ತೆರಿಗೆ ಪಾಲನ್ನು ನೀಡದೆ ದ್ವೇಷದ ರಾಜಕಾರಣ ಮಾಡುತ್ತಿದೆ.ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಇಳಿಕೆ ಕಂಡಿದ್ದರೂ ದೇಶದಲ್ಲಿ ಇಂಧನದ ಬೆಲೆ ಏರಿಸಿರುವುದು ಮೋದಿ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿದೆ. ದರ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ವಿ. ನಾಗರಾಜು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮಿತ್ರ,ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸುನೀಲ್, ಗುರು ಆತ್ಮಾನಂದ, ಕನ್ನಲಿ ಚನ್ನಪ್ಪ, ಹೆಚ್.ಎಂ.ಉದಯ್ ಕುಮಾರ್, ಚಿನಕುರಳಿ ರಮೇಶ್, ಅಭಿಲಾಷ್,ಮಂಜು, ದ್ಯಾವಣ್ಣ, ವೀಣಾ ಶಂಕರ್ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ