ಮುಖ್ಯಮಂತ್ರಿ ಸೇರಿದಂತೆ ಉನ್ನತ ಅಧಿಕಾರಿಗಳ ಸಹಿಯನ್ನು ಫೋರ್ಜರಿ ಮಾಡಿ, ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವಜನರನ್ನು ವಂಚಿಸುತ್ತಿದ್ದ ಆರೋಪಿಗೆ ಸಹಕಾರ ನೀಡಿದ ಆರೋಪದ ಮೇಲೆ ಇಬ್ಬರು ಪೇದೆಗಳನ್ನು ಅಮಾನತುಪಡಿಸಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ಚಿಕ್ಕಯ್ಯ ಹಾಗೂ ಸೆಂಟ್ರಲ್ ಠಾಣೆಯ ಲೋಕೇಶ್ ಎಂಬುವರನ್ನು ಅಮಾನತು ಮಾಡಲಾಗಿದೆ. 40 ಹೆಚ್ಚು ಜನರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿ ಜೈಲು ಸೇರಿರುವ ಆರೋಪಿ ವೆಂಕಟೇಶ್ ಎಂಬಾತನಿಗೆ ಇಬ್ಬರೂ ಸಹಕರಿಸಿದ್ದರು ಎಂಬುದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.




