Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮೈಸೂರು | ಕಾರು-ಬೈಕ್ ನಡುವೆ ಭೀಕರ ಅಪಘಾತ : ತಾಯಿ-ಮಗ ಸಾವು

ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಇಬ್ಬರು ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಬನ್ನೂರು ಸೇತುವೆ ಬಳಿ ನಡೆದಿದೆ.

ಮೈಸೂರಿನ ಬಿಎಂಶ್ರೀನಗರದ ನಿವಾಸಿ ಶಂಕರ್ (21) ಹಾಗೂ ಆತನ ತಾತಿ ಪಾರ್ವತಿ (48) ಸಾವಿಗೀಡಾದವರು.

ಏನಿದು ಘಟನೆ ?

ಮನೆ ದೇವರಿಗೆ ಪೂಜೆ ಸಲ್ಲಿಸಿ ತಾಯಿ ಮಗ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತಾಯಿ ಹಾಗೂ ಮಗ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಶಂಕರ್ ಸ್ಥಳದಲ್ಲೇ ಮೃತಪಟ್ಟರೆ, ಹಿಂದೆ ಕುಳಿತಿದ್ದ ತಾಯಿ ಪಾರ್ವತಿ ನದಿಗೆ ಹಾರಿ ಬಿದ್ದು ನಾಪತ್ತೆಯಾಗಿದ್ದಾರೆ.

ಪಾರ್ವತಮ್ಮನಿಗಾಗಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಸ್ಥಳಕ್ಕೆ ಬನ್ನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ