Thursday, November 19, 2026

ಪ್ರಾಯೋಗಿಕ ಆವೃತ್ತಿ

ಬೇಲೂರಿನ ಮೊದಲ ಕಬ್ ವಿದ್ಯಾರ್ಥಿ ಧನುಷ್ ಗೆ ಚತುರ್ಥ ಚರಣ ರಾಜ್ಯ ಪ್ರಶಸ್ತಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕ ವತಿಯಿಂದ ನಡೆದ ರಾಜ್ಯಮಟ್ಟದ ವಿಭಾಗದಿಂದ ಚತುರ್ಥ ಚರಣ ರಾಜ್ಯ ಪ್ರಶಸ್ತಿಯನ್ನು 4ನೇ ತರಗತಿಯ ವಿದ್ಯಾರ್ಥಿ ಧನುಷ್ ಬಿ.ಎಸ್. ಪಡೆದಿದ್ದಾರೆ.

ಚತುರ್ಥ ಚರಣ ರಾಜ್ಯ ಪ್ರಶಸ್ತಿಯನ್ನು  ಪಡೆದ ಬೇಲೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ 4ನೇ ತರಗತಿಯ ವಿದ್ಯಾರ್ಥಿ ಧನುಷ್ ಬಿ.ಎಸ್. ಅವರು ಈ ಪ್ರಶಸ್ತಿಯನ್ನು ಪಡೆದಿರುವುದು ಬೇಲೂರಿನ ಮೊದಲ ಕಬ್ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇವರನ್ನು ಶಾಲೆಯ ಮುಖ್ಯ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಊರಿನ ಗ್ರಾಮಸ್ಥರು ಅಭಿನಂದಿಸಿದ್ದಾರೆ. ಸ್ಕೌಟ್ ಮಾಸ್ಟರ್ ಮಹೇಶ್ ಅವರ ಮಾರ್ಗದರ್ಶನದಲ್ಲಿ ಈ ಪ್ರಶಸ್ತಿಯನ್ನು ಪಡೆಯಲು ಅರ್ಹರಾಗಿದ್ದಾರೆ ಎಂಬುದು ಸಂತಸದ ವಿಷಯವಾಗಿದೆ.

ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತರಾದ  ಪಿ. ಜಿ. ಆರ್. ಸಿಂಧಿಯಾ ಅವರ ನೇತೃತ್ವದಲ್ಲಿ ಹಾಗೂ ಮಂಡ್ಯ ಜಿಲ್ಲಾ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಮುಖ್ಯ ಆಯುಕ್ತರು ಎಲ್ಲರೂ ಸಹ ಇವರನ್ನು ಅಭಿನಂದಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ