ಬಾಬಾಸಾಹೇಬ್ ಡಾ.ಅಂಬೇಡ್ಕರ್ ಅವರ ಆಶಯ ಮತ್ತು ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಹೇಳಿದರು.
ಮಂಡ್ಯ ನಗರದ ಗಾಂಧಿನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಗಾಂಧಿನಗರ ಅಭಿವೃದ್ದಿ ಸಂಘದ ಕಚೇರಿಯಲ್ಲಿ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ-ವಿಕಲಚೇತನರಿಗೆ ವೀಲ್ ಚೇರ್ ವಿತರಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇಂದು ಪ್ರಪಂಚಾದ್ಯಂತ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸುತ್ತಾರೆ.ಇಂದು ಪ್ರತಿಯೊಬ್ಬ ನಾಗರೀಕನೂ ಸಂತಸ ಪಡುವ ದಿನವಾಗಿದೆ.ಎಲ್ಲರೂ ಅಂಬೇಡ್ಕರ್ ಅವರ ಆಶಯ ಮತ್ತು ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ನುಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಗಾಂಧಿನಗರ ಅಭಿವೃದ್ಧಿ ಸಂಘಟನೆ ಮಾಡಿ, ಅನೇಕ ಸಾಮಾಜಿಕ ಕಳಕಳಿಯುಳ್ಳ ಸೇವಾ ಕಾರ್ಯಗಳನ್ನು ಮಾಡುತ್ತಿದ್ದೀರಿ, ವಿದ್ಯಾರ್ಥಿಗಳಿಗೆ ಮತ್ತು ದುರ್ಬಲರಿಗೆ ಪ್ರೋತ್ಸಾಹ ಮತ್ತು ನೆರವು ನೀಡುವ ಮೂಲಕ ಅರ್ಥಪೂರ್ಣವಾಗಿ ಜಯಂತಿ ಆಚರಿಸುತ್ತಿರುವುದು ಶ್ಲಾಘನೀಯ ಎಂದರು.
ಅಂಬೇಡ್ಕರ್ ಅವರು ಮೂರು ಮಂತ್ರಗಳನ್ನು ನೀಡಿದ್ದಾರೆ, ಶಿಕ್ಷಣ, ಸಂಘಟನೆ, ಹೋರಾಟ ಎಂಬುದಾಗಿದೆ.ಈ ಮಂತ್ರಗಳನ್ನು ಸದಾ ಜಪಿಸಬೇಕು ಪ್ರಗತಿಗಾಗಿ ಬಳಸಬೇಕು ಎಂದು ಸಲಹೆ ನೀಡಿದರು.
ಬಳಿಕ ಮಾತನಾಡಿದ ಅಭಿವೃದ್ದಿ ಸಂಘ ಪ್ರಧಾನ ಕಾರ್ಯದರ್ಶಿ ತುಳಸೀಧರ್, ಎಲ್ಲರ ಸಹಕಾರದೊಂದಿಗೆ ಸಂಘವು ಪ್ರಗತಿಯಲ್ಲಿದ್ದು, ವಿದ್ಯಾರ್ಥಿಗಳಿಗೆ ಮತ್ತು ದುರ್ಬಲರಿಗೆ ನೆರವು ನೀಡಲಾಗುತ್ತಿದೆ, ಪ್ರತಿವರ್ಷ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಸೇವಾಕಾರ್ಯಗಳಮೂಲಕ ಮಾಡಲಾಗುತ್ತಿದೆ ಎಂದರು.
ಮುAದಿನ ದಿನಗಳಲ್ಲಿ ಮತ್ತಷ್ಟು ಆರ್ಥಿಕ ಸಂಪತ್ತು ಸಂಗ್ರಹಿಸಿ, ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಅಗತ್ಯಯುಳ್ಳವರಿಗೆ ನೆರವಾಗುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸುತ್ತೇವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹಲವು ವಿಕಲಚೇತನರಿಗೆ ವೀಲ್ ಚೇರ್ ವಿತರಣೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಯಿತು. ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳನ್ನು ಅಭಿನಂಧಿಸಿದರು, ಅನ್ನಸಂತರ್ಪಣೆ ನಡೆಯಿತು.
ಕಾರ್ಯಕ್ರಮದಲ್ಲಿ ಡಯಟ್ ನಿವೃತ್ತ ಉಪನ್ಯಾಸಕ ಗುರುಮೂರ್ತಿ, ಸಂಘದ ಅಧ್ಯಕ್ಷ ಲೋಕೇಶ್ವರ್, ನಿವೃತ್ತ ಅಧಿಕಾರಿ ಪುರುಷೋತ್ತಮ್, ರಘುನಾಥ್, ಸುಧಾಮಾ, ತಮ್ಮಣ್ಣರಾಜ್, ರಾಚಯ್ಯ ಮತ್ತಿತರರಿದ್ದರು.




