Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಸಮರ್ಪಕ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ

ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ, ಕಂದೇಗಾಲ ಸೇರಿದಂತೆ ವಿವಿಧ ಭಾಗಗಳ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕೆಂದು ರೈತರು ತಾಲ್ಲೂಕಿನ ಕಾಗೇಪುರ ಕಾವೇರಿ ನೀರಾವರಿ ನಿಗಮದ ಮುಂದೆ ಪ್ರತಿಭಟನೆ ನಡೆಸಿದರು.

ಕಚೇರಿ ಮುಂದೆ ಜಮಾವಣೆಗೊಂಡ ರೈತರು ಅಧಿಕಾರಿಗಳ ವಿರುದ್ದ ಘೋಷಣೆಗಳನ್ನು ಕೂಗಿ ಕೂಡಲೇ ಬೆಳೆದಿರುವ ಬೆಳೆಗಳಿಗೆ ನೀರು ಕೊಡಬೇಕೆಂದು ಆಗ್ರಹಿಸಿದರು.

ಕೆಆರ್‌ಎಸ್ ಅಣೆಕಟ್ಟೆಯಿಂದ ಕಾಲುವೆಗಳಿಗೆ ನೀರು ಹರಿಸುತ್ತಿದ್ದರೂ ಕೂಡ ಕೊನೆಯ ಭಾಗದ ಜಮೀನುಗಳಿಗೆ ನೀರು ತಲುಪುತ್ತಿಲ್ಲ, ಈಗಾಗಲೇ ಬೆಳೆದಿರುವ ಕಬ್ಬು, ಭತ್ತ, ರಾಗಿ, ಜೋಳದ ಬೆಳೆಗಳು ಒಣಗುತ್ತಿದ್ದು, ಕೂಡಲೇ ನೀರು ಹರಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆ ಸ್ಥಳಕ್ಕೆ ಮಾಜಿ ಶಾಸಕ ಡಾ. ಕೆ ಅನ್ನದಾನಿ ಆಗಮಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ದೂರವಾಣಿಯ ಮೂಲಕ ಮಾತನಾಡಿ ಕೂಡಲೇ ಕೊನೆಯ ಭಾಗದ ರೈತರಿಗೆ ನೀರು ನೀಡಬೇಕೆಂದರು.

ಸೋಮವಾರದವರೆವಿಗೂ ಕಾಲುವೆಗಳಲ್ಲಿ ನೀರು ಹರಿಸಲಾಗುವುದೆಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ದೂರವಾಣಿಯಲ್ಲಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ರೈತರು ವಾಪಸ್ ಪಡೆದುಕೊಂಡರು.

ಪ್ರತಿಭಟನೆಯಲ್ಲಿ ವಿವಿಧ ಗ್ರಾಮಗಳ ರೈತರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ