Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಕಾಂಗ್ರೆಸ್ ಒಬಿಸಿ ಘಟಕದ ಉಪಾಧ್ಯಕ್ಷರಾಗಿ ಶ್ರೀಕಂಠಯ್ಯ ನೇಮಕ

ಮಂಡ್ಯ ಜಿಲ್ಲಾ ಕಾಂಗ್ರೇಸ್ ಸಮಿತಿಯ ಇತರೆ ಹಿಂದುಳಿದ ವರ್ಗಗಳ ವಿಭಾಗದ ಮಂಡ್ಯ ಜಿಲ್ಲಾ ಸಮಿತಿಯ ಉಪಾಧ್ಯಕ್ಷರನ್ನಾಗಿ ಬಸರಾಳು ಗ್ರಾಮದ ಶ್ರೀಕಂಠಯ್ಯ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಅವರು ನೇಮಕಾತಿ ಪತ್ರ ವಿತರಿಸಿದರು.

ಪಕ್ಷದ ಸಂಘಟನೆ ಕಾರ್ಯದಲ್ಲಿ ಇನ್ನೂ ಹೆಚ್ಚಿನ ಆಸಕ್ತಿಯಿಂದ ಸಕ್ರಿಯವಾಗಿ ತೊಡಗಿಸಿಕೊಂಡು ಕಾಂಗ್ರೆಸ್ ಪಕ್ಷದ ಸಬಲೀಕರಣ, ಸಂಘಟನೆ, ಬಲವರ್ಧನೆ ಕಾರ್ಯದಲ್ಲಿ ಸಮರ್ಪಣ ಭಾವದಿಂದ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇತರೆ ಹಿಂದುಳಿದ ವರ್ಗಗಳ ವಿಭಾಗ ಅಧ್ಯಕ್ಷ ಸಾತನೂರು ಕೃಷ್ಣ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸುಂಡಹಳ್ಳಿ ಮಂಜುನಾಥ್, ಹೆಚ್.ವಿ. ನಾಗರಾಜು, ಜಿಲ್ಲಾ ವಕ್ತಾರ ಸಿ.ಎಂ.ದ್ಯಾವಪ್ಪ ಹಾಗೂ ಶಿವಣ್ಣ ಇತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ