ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರಿಗೆ ರಾಜಕೀಯದಲ್ಲಿ ಇನ್ನೂ ಹೆಚ್ಚಿನ ಅಧಿಕಾರ ಸಿಗಲಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.
ರಾಜ್ಯ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ಜಿಲ್ಲಾಸ್ಪತ್ರೆ ಯಲ್ಲಿರುವ ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಉಪಹಾರ, ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿ ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿ ಮನೆಮನೆಗೆ ಸಂವಿಧಾನದ ಆಶಯವನ್ನು ಸಾರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಇನ್ನು ಉತ್ತಮ ರೀತಿಯಲ್ಲಿ ಕೆಲಸ ಮಾಡಲಿ ಎಂದು ಶುಭ ಹಾರೈಸಿದರು.

ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್ ಮಾತನಾಡಿ, ಸಚಿವ ಹೆಚ್.ಸಿ.ಮಹದೇವಪ್ಪ ಅವರು ಸಂವಿಧಾನವನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು ಎಂಬ ನಿಟ್ಟಿನಲ್ಲಿ ಸಂವಿಧಾನ ರಥಯಾತ್ರೆ ಮಾಡಿದರು ಎಂದು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ದೇವರು ಅವರಿಗೆ ಹೆಚ್ಚಿನ ಆಯಸ್ಸು,ಆರೋಗ್ಯ, ಹೆಚ್ಚಿನ ಅಧಿಕಾರ ಕರುಣಿಸಲಿ ಎಂದು ಶುಭ ಹಾರೈಸಿದರು.
ಮಂಡ್ಯ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷ ಸಿ.ಡಿ.ವಿಜಯಕುಮಾರ್ ಮಾತನಾಡಿ ನೊಂದವರು, ಧಮನಿತರ ಪರ ಸಚಿವ ಮಹದೇವಪ್ಪ ಅವರು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.
ದಲಿತರು,ಹಿಂದುಳಿದವರು, ಅಲ್ಪಸಂಖ್ಯಾತರ ಹಕ್ಕುಗಳನ್ನು ಸಂರಕ್ಷಿಸುವಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.ದೇವರು ಅವರಿಗೆ ಆರೋಗ್ಯ, ಐಶ್ವರ್ಯ,ಕರುಣಿಸಿ ಇನ್ನೂ ಹೆಚ್ಚಿನ ಅಧಿಕಾರ ಸಿಗಲಿ ಎಂದು ಭಗವಾನ್ ಗೌತಮ ಬುದ್ಧರಲ್ಲಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಹೊಂಬಯ್ಯ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅಂಜನಾ ಶ್ರೀಕಾಂತ್, ನಗರಸಭಾ ಸದಸ್ಯ
ಎಂ.ಎನ್. ಶ್ರೀಧರ್, ಕಬ್ಬಾಳಯ್ಯ, ವೀಣಾ ಶಂಕರ್, ಹರೀಶ್, ದೀಪಕ್, ಗಂಗರಾಜು, ಎಚ್.ಕೆ.ರುದ್ರಪ್ಪ, ಸೇರಿದಂತೆ ಇತರರು ಹಾಜರಿದ್ದರು




