Thursday, November 19, 2026

ಪ್ರಾಯೋಗಿಕ ಆವೃತ್ತಿ

ಏ.27ರಂದು ಮಂಡ್ಯ ಜಿಲ್ಲಾ ಮಟ್ಟದ ಬೌದ್ಧ ಸಮ್ಮೇಳನ : ಗುರುಮೂರ್ತಿ

ಮಂಡ್ಯ ಜಿಲ್ಲಾ ಬುದ್ಧಿಸ್ಟ್ ಒಕ್ಕೂಟ, ಮಾನವ ಬಂಧುತ್ವ ವೇದಿಕೆ ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಹಯೋಗದಲ್ಲಿ ಮಂಡ್ಯ ಜಿಲ್ಲಾ ಮಟ್ಟದ ಬೌದ್ಧ ಸಮ್ಮೇಳನವು ಏಪ್ರಿಲ್ 27 ರ ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಒಕ್ಕೂಟದ ಉಪಾಧ್ಯಕ್ಷ ಗುರುಮೂರ್ತಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೌದ್ಧ ಸಮ್ಮೇಳನದ ನಿಮಿತ್ತ ನಡೆಯುವ ಬುದ್ಧ ಅಂಬೇಡ್ಕರ್ ಮತ್ತು ಸರ್ವಾಧ್ಯಕ್ಷರ ಮೆರವಣಿಗೆಗೆ ಶಾಸಕ ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಬಳಿ ಬೆಳಿಗ್ಗೆ 10 ಗಂಟೆಗೆ ಚಾಲನೆ ನೀಡಲಿದ್ದಾರೆ ಎಂದರು.

ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಚನ್ನಲಿಂಗನಹಳ್ಳಿ ಬೌದ್ಧ ಬಿಕ್ಕು ಜೀತವನದ ಮನೋರಕ್ಕಿತ ಬಂತೇಜಿ ದಿವ್ಯ ಸಾನಿಧ್ಯದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಬುದ್ಧಿಸ್ಟ್ ಒಕ್ಕೂಟದ ಎಂ.ಸಿ.ಬಸವರಾಜು ಪ್ರಾಸ್ತಾವಿಕ ನುಡಿ ನುಡಿಯಲಿದ್ದು, ಶಾಸಕರಾದ ರವಿಕುಮಾರ್ ಗಣಿಗ, ಕೆ ಎಂ ಉದಯ್, ರಮೇಶ್ ಬಾಬು ಬಂಡಿಸಿದ್ದೇಗೌಡ, ಪಿ ಎಂ ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಎಚ್ ಟಿ ಮಂಜು ಘನ ಉಪಸ್ಥಿತಿ ವಹಿಸುವರು, ರೈತ ಮುಖಂಡರಾದ ಸುನಂದ ಜಯರಾಮ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಜಿಲ್ಲಾ ಬುದ್ಧಿಸ್ಟ್ ಒಕ್ಕೂಟದ ಅಧ್ಯಕ್ಷ ಚಿಕ್ಕರಸಿನಕೆರೆ ಸಿ ಶಿವಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಅಭಿ ಗೌಡ, ಉಪಾಧ್ಯಕ್ಷ ನಾಗರಾಜ್ ಅಂಬೇಡ್ಕರ್, ಟಿ ಎಸ್ ಕಾಳಯ್ಯ, ಟಿ ಎನ್ ಸತ್ಯ, ಎಂ ವಿನಯಕುಮಾರ್, ಬಿ ಟಿ ವಿಶ್ವನಾಥ್, ಲಂಕೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮಧ್ಯಾಹ್ನ 12-15 ಕ್ಕೆ ‘ಬುದ್ಧನ ಚಿಂತನೆ ಮತ್ತು ಪರಿಣಾಮಗಳು’ ವಿಷಯ ಕುರಿತ ಗೋಷ್ಠಿಯು ನಡೆಯಲಿದ್ದು, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲೇಖಕ ಮೂಡ್ನಾ ಕೂಡು ಚಿನ್ನಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ, ಪ್ರಾಧ್ಯಾಪಕರು ಹಾಗೂ ಲೇಖಕರಾದ ಶೈಲಜಾ ವೇಣುಗೋಪಾಲ್ ವಿಷಯ ಮಂಡನೆ ಮಾಡಲಿದ್ದು, ಬುದ್ಧಿಸ್ಟ್ ಒಕ್ಕೂಟದ ಹುರುಗಲವಾಡಿ ರಾಮಯ್ಯ, ಎನ್ ಸುರೇಶ್ ಕುಮಾರ್, ಬಿ ಸ್ವಾಮಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ‘ಬುದ್ಧರ ಚಿಂತನೆಗಳಲ್ಲಿ ಸ್ವಾಮಿ ವಿವೇಕಾನಂದರು ಮತ್ತು ಇತರ ದಾರ್ಶನಿಕರು’ ವಿಷಯ ಕುರಿತು ನಡೆಯುವ ಗೋಷ್ಠಿಯ ಅಧ್ಯಕ್ಷತೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ. ಎಲ್.ಎನ್.ಮುಕುಂದ ರಾಜ್ ವಹಿಸಲಿದ್ದು, ಸಾಹಿತಿ ಪ್ರೊ. ಕೆ ಎಸ್ ಭಗವಾನ್ ವಿಚಾರ ಮಂಡನೆ ಮಾಡಲಿದ್ದಾರೆ, ಜಿಲ್ಲಾ ಬುದ್ಧಿಸ್ಟ್ ಒಕ್ಕೂಟದ ಜಯರಾಮು, ನಿರಂಜನ್ ಭೋದ, ಜಯ ಸುಧಾ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಧ್ಯಾಹ್ನ 3.30ಕ್ಕೆ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದ್ದು, ಜಿಲ್ಲಾ ಬುದ್ಧಿಸ್ಟ್ ಒಕ್ಕೂಟದ ಗೌರವಾಧ್ಯಕ್ಷ ಯಮದೂರು ಸಿದ್ದರಾಜು ಅಧ್ಯಕ್ಷತೆ ವಹಿಸಲಿದ್ದಾರೆ, ಅಣ್ಣೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ದೊಡ್ಡ ಬೋರಯ್ಯ ಸಮಾರೋಪ ಭಾಷಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಬುದ್ಧಿಸ್ಟ್ ಒಕ್ಕೂಟದ ಸುಜಯಕುಮಾರ್, ಡಿ ಪ್ರೇಮ್ ಕುಮಾರ್, ಕೆ ಎಚ್ ಮಹದೇವ, ಕೆ ಶಿವಲಿಂಗಯ್ಯ, ಸಿದ್ದಯ್ಯ ನೆಟ್ಕಲ್, ಮಂಜುನಾಥ್, ಮುನಿರಾಜು, ಚಂದ್ರಶೇಖರಯ್ಯ ಎಚ್ ಆರ್, ಟಿ ಎಲ್ ನಾಗರಾಜು, ಪ್ರಮೋದ್ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಅಧ್ಯಕ್ಷ ಸಿ.ಶಿವಲಿಂಗಯ್ಯ, ಖಜಾಂಚಿ ಬಿ.ಅನ್ನದಾನಿ, ದೇವರಾಜ್ ಕೊಪ್ಪ, ವಿನಯ್‌ಕುಮಾರ್, ಅಭಿಗೌಡ, ಕುಮಾರ್, ಗುರುಶಂಕರ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ