ರೈತರ ಜೀವನಾಡಿ ಕೆ.ಆರ್.ಎಸ್. ಬಳಿ ಅಮ್ಯೂಸ್ಮೆಂಟ್ ಪಾರ್ಕ್, ಕಾವೇರಿ ಆರತಿ, ಹಿನ್ನೀರಿನ ಯೋಜನೆಗಳನ್ನು ಕೈಬಿಡಬೇಕೆಂದು ರೈತ ಹೋರಾಟಗಾರರಾದ ಸುನಂದ ಜಯರಾಂ ಒತ್ತಾಯಿಸಿದ್ದಾರೆ.
ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣದಿಂದ ಸಂಬಂಧಿಸಿದಂತೆ ಅಣೆಕಟ್ಟೆಗೆ, ಪರಿಸರಕ್ಕೆ, ರೈತರಿಗೆ, ಅಣೆಕಟ್ಟಿನ ವ್ಯಾಪ್ತಿ ಗ್ರಾಮಗಳಿಗೆ ಧಕ್ಕೆಯಾಗುವುದರ ಜೊತೆಗೆ ಗ್ರಾಮಗಳ ಪರಿಸರ, ಕೃಷಿ ಬದುಕು ಪಲ್ಲಾಟವಾಗುತ್ತದೆ ಎಂದು ಕಿಡಿಕಾರಿದ್ದಾರೆ.
ಈ ಯೋಜನೆಯು ಕೆ.ಆರ್.ಎಸ್. ಪ್ರದೇಶದ ಯುವ ಸಮೂಹಗಳ ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. 120 ವರ್ಷಗಳ ಅಣೆಕಟ್ಟಿನ ಭದ್ರತೆಗೆ ನೇರ ಪರಿಣಾಮವಾಗುತ್ತದೆ. ಕೃಷಿ ಬದುಕು ನಾಶವಾಗುತ್ತದೆ. ಪ್ರವಾಸೋದ್ಯಮದ ಹೆಸರಿನಲ್ಲಿ ಅನೇಕ ಕೆಟ್ಟ ಪರಿಣಾಮಗಳು ಉಂಟಾಗುತ್ತದೆ ಎಂದು ಎಚ್ಚರಿಸಿದರು.
ಅಣೆಕಟ್ಟಿನ ಬಳಿ ಯಾವುದೇ ದಟ್ಟಣೆಯ ಸಾರ್ವಜನಿಕ ಚಟುವಟಿಕೆಗಳು ನಡೆಯಬಾರದು. ದಟ್ಟಣೆಯ ವಾಹನಗಳ ಪ್ರವೇಶದಿಂದ ಅಮ್ಲಜನಕ ಉತ್ಪಾದನೆಗೆ ತಡೆಯಾಗುತ್ತದೆ. ಹಸಿರು ವಲಯ ನಾಶವಾಗುತ್ತದೆ. ಈ ಸಂಬಂಧ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ಹಾಗೂ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಯೋಜನೆಯನ್ನು ಕೈಬಿಡಬೇಂದು ಒತ್ತಾಯಿಸಿದ್ದಾರೆ.




