ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಏಪ್ರಿಲ್ 30 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 9.30 ಗಂಟೆಗೆ ಮಂಡ್ಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 10.30 ಗಂಟೆಗೆ ಮಂಡ್ಯ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆಯಲಿರುವ ವಿಶ್ವಗುರು ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಮಂಡ್ಯ ಜಿಲ್ಲೆಯಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ನಂತರ ಮಧ್ಯಾಹ್ನ 2.30 ಗಂಟೆಗೆ ಮಂಡ್ಯ ರಸ್ತೆಯ ಮೂಲಕ ಮದ್ದೂರು- ಚನ್ನಪಟ್ಟಣ -ರಾಮನಗರ- ಬಿಡದಿ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರು ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




