Saturday, November 21, 2026

ಪ್ರಾಯೋಗಿಕ ಆವೃತ್ತಿ

ಸ್ಥಳೀಯಸಂಸ್ಥೆ ನೌಕರರ ಅನಿರ್ಧಿಷ್ಟ ಮುಷ್ಕರ : ನಾಗರಾಜು

ರಾಜ್ಯದಲ್ಲಿನ ಎಲ್ಲಾ ಮಹಾನಗರ ಪಾಲಿಕೆ/ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ.೨೭ರಂದು ಅನಿರ್ಧಿಷ್ಟ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ನಾಗರಾಜು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಈಗಾಗಲೇ ಹಲವು ಪ್ರತಿಭಟನಾ ಹೋರಾಟಗಳನ್ನು ನಡೆಸಿ, ಇಲಾಖೆಯ ಅಧಿಕಾರಿಗಳನ್ನು, ಸಚಿವರನ್ನು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರೂ ಯಾವುದೇ ಕ್ರಮವಹಿಸಿಲ್ಲ ಎಂದರು.

ರಾಜ್ಯದ ಪೌರನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಕೆಜಿಐಪಿ ಜ್ಯೋತಿ ಸಂಜೀವಿನಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ವಿಸ್ತರಿಸುವುದು, ಹೊರಗುತ್ತಿಗೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ನೇರ ಪಾವತಿಗೆ ಒಳಪಡಿಸುವುದು, ಸಮಾನ ಕೆಲಸಕ್ಕೆ ಸಮಾನ ವೇತನ, ಟೈಮ್ ಸ್ಕಿಲ್ ನೌಕರರನ್ನು ಖಾಲಿ ಇರುವ ಹುದ್ದೆಗಳಿಗೆ ವಿಲೀನ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿರಿಸಲಾಗಿದೆ ಎಂದು ಹೇಳಿದರು.

ತಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಮೇ ೩ರಂದು ಮಂಡ್ಯ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಗುವುದು, ೧೫ ದಿನಗಳ ಒಳಗೆ ಬೇಡಿಕೆ ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಮಹಾನಗರ ಪಾಲಿಕೆ/ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ನೌಕರ ಸಿಬ್ಬಂದಿ ಕೆಲಸ ಮಾಡುವುದನ್ನು ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಮಂಡ್ಯ ಜಿಲ್ಲಾ ಶಾಖೆಯ ಅಧ್ಯಕ್ಷ ಮಹದೇವು, ಗೌರವ ಅಧ್ಯಕ್ಷ ನಂಜುಂಡ, ಉಪಾಧ್ಯಕ್ಷ ಚಂದ್ರ, ಸೋಮಸುಂದರ್, ಹರೀಶ್, ಲಿಂಗಮಯಿ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ