ಮಂಗಲ ಟಿ.ತಿಮ್ಮೇಗೌಡ ಪ್ರತಿಷ್ಠಾನದ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೇ 3ರ ಸಂಜೆ 5 ಗಂಟೆಗೆ ಮಂಡ್ಯನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಎ.ಸಿ.ರಮೇಶ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮಾರಂಭದಲ್ಲಿ ಟಿ.ತಿಮ್ಮೇಗೌಡ ಜನಮುಖಿ ಆಡಳಿತ ಪ್ರಶಸ್ತಿ, ಲಿಂಗಮ್ಮ ದೊಡ್ಡಿತಿಮ್ಮೇಗೌಡ ಕೃಷಿಕ ಪ್ರಶಸ್ತಿ, ಎಂ.ಆರ್.ಶಶಿಕಲಾ ತಿಮ್ಮೇಗೌಡ ವಿದ್ಯಾರ್ಥಿ ಪುರಸ್ಕಾರ ಪ್ರದಾನ ಮಾಡಲಿದ್ದು, ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ ತರುವಲ್ಲಿ ಯಶಸ್ವಿಯಾದ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಗೌರವಿಸಿ ಅಭಿನಂದಿಸಲಾಗುವುದು ಎಂದರು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವಮಾನವ ಕ್ಷೇತ್ರದ ಕಾರ್ಯದರ್ಶಿ ಪುರುಷೋತ್ತಮನಂದನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯದ ಕಾರ್ಯಕ್ರಮವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿ, ಅಭಿನಂದನೆ ಸ್ವೀಕರಿಸುವರು ಎಂದು ಹೇಳಿದರು.
ಜನಮುಖಿ ಐಎಎಸ್ ಅಧಿಕಾರಿ ಪ್ರಶಸ್ತಿಯನ್ನು ನೋಂದಣಿ ಮಹಾಪರಿವೀಕ್ಷಕ ಮತ್ತು ಮುದ್ರಣ ಆಯುಕ್ತ ಡಾ.ಕೆ.ಎ.ದಯಾನಂದ ಅವರಿಗೆ ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಪ್ರದಾನ ಮಾಡುವರು, ಲಿಂಗಮ್ಮ ದೊಡ್ಡಿತಿಮ್ಮೇಗೌಡ ಕೃಷಿಕ ಪ್ರಶಸ್ತಿಯನ್ನು ಪ್ರಗತಿಪರ ಕೃಷಿಕ ಬಿ.ಎಂ.ನಂಜೇಗೌಡ ಅವರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಪ್ರದಾನ ಮಾಡುವರು ಹಾಗೂ ಎಂ.ಆರ್.ಶಶಿಕಲಾ ತಿಮ್ಮೇಗೌಡ ವಿದ್ಯಾರ್ಥಿ ಪುರಸ್ಕಾರವನ್ನು ಸೌಮ್ಯ ಹಾಗೂ ಮೋನಿಷ ಅವರಿಗೆ ಶಾಸಕ ರವಿಕುಮಾರ್ಗೌಡ ನೀಡುವರು ಎಂದು ವಿವರಿಸಿದರು.
ಪ್ರತಿಷ್ಠಾನದ ಸಲಹೆಗಾರ ಡಾ.ಎಚ್.ಎಂ.ವೆಂಕಟಪ್ಪ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಟಿ.ತಿಮ್ಮೇಗೌಡ, ಎಂ.ಆರ್.ಶಶಿಕಲಾ ತಿಮ್ಮೇಗೌಡ ಉಪಸ್ಥಿತರಿರಲಿದ್ದು, ಪ್ರಶಸ್ತಿ ಪುರಸ್ಕೃತರಿಗೆ 25 ಸಾವಿರ ನಗದು, ಪ್ರತಿಭಾ ಪುರಸ್ಕಾರಕ್ಕೆ ತಲಾ 5000 ನಗದು ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಪ್ರತಿಷ್ಠಾನದ ಜಂಟಿ ಕಾರ್ಯದರ್ಶಿ ಕನ್ನಿಕ, ಡಿ.ಎಲ್.ದೇವರಾಜ್, ಶಂಕರೇಗೌಡ, ಟ್ರಸ್ಟಿಗಳಾದ ಲಂಕೇಶ್, ಕೃಷ್ಣೇಗೌಡ ಇದ್ದರು.




