Thursday, November 19, 2026

ಪ್ರಾಯೋಗಿಕ ಆವೃತ್ತಿ

SSLC ಫಲಿತಾಂಶ| ಈ ಬಾರಿ 66.14ರಷ್ಟು ಉತ್ತೀರ್ಣ: ಮಂಡ್ಯಕ್ಕೆ 12 ನೇ ಸ್ಥಾನ

2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ SSLC ಫಲಿತಾಂಶದ ವಿವರ ನೀಡಿದರು. ಇಂದು ಮಧ್ಯಾಹ್ನ 12.30ರ ನಂತರ ಇಲಾಖೆಯ ವೆಬ್ ಸೈಟ್ ಗಳಲ್ಲಿ ಫಲಿತಾಂಶಗಳನ್ನು ವೀಕ್ಷಿಸಬಹುದು.

ಈ ಬಾರಿ ಶೇ.62.34ರಷ್ಟು ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ-91.12%. ಎರಡನೇ ಸ್ಥಾನ ಉಡುಪಿ-89.96% 3ನೇ ಸ್ಥಾನ ಉತ್ತರ ಕನ್ನಡ-83.19%. ಕಲಬುರಗಿಗೆ ಕೊನೆಯ ಸ್ಥಾನ-42.42% ಲಭ್ಯವಾಗಿದೆ. ಮಂಡ್ಯ ಜಿಲ್ಲೆಯು 12 ಸ್ಥಾನ ಪಡೆದಿದ್ದು, 69.27ರಷ್ಟು ಫಲಿತಾಂಶ ಪಡೆದಿದೆ.

ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ರಾಜ್ಯಾದ್ಯಂತ ಸುಮಾರು 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.  4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದರು.

22 ವಿದ್ಯಾರ್ಥಿಗಳು 625ರಲ್ಲಿ 625 ಅಂಕಗಳನ್ನು ಪಡೆದಿದ್ದಾರೆ. ಇವರಲ್ಲಿ ‌ ಕನ್ನಡ ಮತ್ತು ಉರ್ದು ಮಾಧ್ಯಮದ ಎರಡು ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ಸೇರಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ