Friday, November 20, 2026

ಪ್ರಾಯೋಗಿಕ ಆವೃತ್ತಿ

ಪಾಂಡವಪುರ | ಹಾಡಹಗಲೇ ವ್ಯಕ್ತಿಯೊಬ್ಬನ ಭೀಕರ ಕೊಲೆ

ಪಾಂಡವಪುರ ತಾಲ್ಲೂಕಿನ ಬೆಳ್ಳಾಳೆ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ಹಾಡಹಗಲೇ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಮಾಣಿಕ್ಯನಹಳ್ಳಿ ಗ್ರಾಮದ ನರಸಿಂಹೇಗೌಡ (55) ಕೊಲೆಯಾಗಿದ ವ್ಯಕ್ತಿ. ದುಷ್ಕರ್ಮಿಗಳು ಮಾರಕ ಆಯುಧಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.

ಕೊಲೆಯಾದ ನರಸಿಂಹೇಗೌಡನ ಮಗ ನಿತಿನ್ ಈ ಹಿಂದೆ 2024 ಜನವರಿ 20ರಂದು ಮೇಲುಕೋಟೆಯ ಯೋಗಾನರಸಿಂಹಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎನ್ನಲಾಗಿದೆ.

ಸ್ಥಳಕ್ಕೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ಅಧೀಕ್ಷಕ ತಿಮ್ಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿ, ತನಿಖಾಧಿಕಾರಿಗಳಿಗೆ ಪ್ರಕರಣದ ತನಿಖೆ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು.

ಜನವರಿ 20, 2024ರಂದು ನಡೆದಿದ್ದೇನು ?

ಮೇಲುಕೋಟೆ ಎಸ್‌ಇಟಿ ಶಾಲೆಯ ಶಿಕ್ಷಕಿ ಹಾಗೂ ಪಾಂಡವಪುರ ತಾಲ್ಲೂಕಿನ ಮಾಣಿಕ್ಯನಹಳ್ಳಿಯ ಲೋಕೇಶ್ ಎಂಬುವರ  ಪತ್ನಿ ಶಿಕ್ಷಕಿ ದೀಪಿಕಾ (35) ಕೊಲೆಯಾದ್ದರು. ಈ ಪ್ರಕರಣದಲ್ಲಿ ನರಸಿಂಹೇಗೌಡನ ಮಗ ನಿತಿನ್ ಪ್ರಮುಖ ಆರೋಪಿಯಾಗಿದ್ದ.

2024 ಜ.20ರಂದು ಮೇಲುಕೋಟೆ ಎಸ್‌ಇಟಿ ಶಾಲೆ ಹೋಗಿದ್ದ ದೀಪಿಕಾ ಮರಳಿ ಮನೆಗೆ ಬಂದಿರಲಿಲ್ಲ. ಇದರಿಂದಾಗಿ ಆಕೆಯ ಕುಟುಂಬದವರು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡ ಪೊಲೀಸರಿಗೆ ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಅವರ ಸ್ಕೂಟರ್ ಕಂಡು ಬಂತು. ಕೊಲೆ ಮಾಡಿದ ದುರುಳರು ಗುಂಡಿ ತೆಗೆದು ಆಕೆಯನ್ನು ಹೂತು ಹಾಕಿರುವುದು ಬೆಳಕಿಗೆ ಬಂದಿತ್ತು, ಆಕೆಯ ಮೃತದೇಹವನ್ನು ಹೊರತೆಗೆದು ಮಂಡ್ಯ ಮಿಮ್ಸ್‌ ಆಸ್ಪತ್ರೆಗೆ ಸಾಗಿಸಲಾಗಿತ್ತು.

ಜ.20 ಮಧ್ಯಾಹ್ನ ಬೆಟ್ಟದ ತಪ್ಪಲಿನಲ್ಲಿ ಇಬ್ಬರು ಕಿಡಿಗೇಡಿಗಳೊಂದಿಗೆ ಆಕೆಯೊಂದಿಗೆ ಜಗಳ ನಡೆಸುತ್ತಿರುವ 10 ಸೆಕೆಂಡ್ ಗಳ ದೃಶ್ಯವನ್ನು ಅಲ್ಲಿಗೆ ಬಂದಿದ್ದ, ಪ್ರವಾಸಿಗರೊಬ್ಬರು ಚಿತ್ರಿಕರಿಸಿದ್ದು, ಅದು ಪೊಲೀಸರಿಗೆ ಲಭ್ಯವಾಗಿತ್ತು. ಇದರ ಆಧಾರದ ಮೇಲೆ ಕೊಲೆಗಾರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.  ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿತಿನ್ ಎಂಬುವನನ್ನು ಮೇಲುಕೋಟೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ