Thursday, November 19, 2026

ಪ್ರಾಯೋಗಿಕ ಆವೃತ್ತಿ

ನ್ಯಾಯಮೂರ್ತಿ ಎನ್.ಕುಮಾರ್ ಹೇಳಿಕೆಗೆ ದಸಂಸ ಖಂಡನೆ

ಮೊದಲು ಸಮಾನತೆ ತಂದದ್ದು ಅಂಬೇಡ್ಕರ್‌ ಅವರಲ್ಲ, ಶಂಕರಾಚಾರ್ಯ ಎಂದು ಹೇಳುವಂತಾಗಬೇಕು ಎಂದಿರುವ ಹೈಕೋರ್ಟ್ ನ್ಯಾಯಮೂರ್ತಿ ಎನ್.ಕುಮಾರ್ ಹೇಳಿಕೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಖಂಡಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾನತೆ ಸಾರಿದ ಬುದ್ಧ ಮತ್ತು ಆತನ ಧಮ್ಮದ ನೈಜ ಇತಿಹಾಸ ತಿರುಚುವ ಕಾರಣಕ್ಕೆ ಎನ್.ಕುಮಾರ್ ಈ ರೀತಿಯ ಹೇಳಿಕೆ ನೀಡಿರಬಹುದು. ಇಂತಹ ಹೇಳಿಕೆ ಅಂಬೇಡ್ಕರ್ ಅವರ ವ್ಯಕ್ತಿತ್ವಕ್ಕೆ ಚ್ಯುತಿ ತರುವಂತದ್ದು ಎಂದರು.

ಚರಿತ್ರೆಯನ್ನು ತಿರುಚಲು ವಿನಾಕಾರಣ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರೆಳೆದು ತಂದು ರಾಷ್ಟ್ರದ್ರೋಹದ ಕೃತ್ಯವೆಸಗುವ ಕೆಲಸ ಹೈಕೋರ್ಟ್ ನ್ಯಾಯಮೂರ್ತಿಯಿಂದಾಗುತ್ತಿರುವುದು ಸಾಮಾಜಿಕ ದೌರ್ಜನ್ಯವಾಗಿದೆ. ಇತಿಹಾಸ ಮೆರೆ ಮಾಚುವ ಸಲುವಾಗಿ ಮನುವಾದಿ ಮನಸ್ಥಿತಿಯ ಹೈಕೋರ್ಟ್ ನ್ಯಾಯಾಮೂರ್ತಿ ಎನ್.ಕುಮಾರ್‌ ಇಂತಹ ಹೇಳಿಕೆ ನೀಡಿದ್ದು, ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಈ ಹಿನ್ನಲೆ ಮೇ 8 ರಂದು ಮಂಡ್ಯ ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪುಪಟ್ಟಿ ಪ್ರದರ್ಶಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಮೈಸೂರು ವಿಭಾಗೀಯ ಸಂಚಾಲಕ ಕೆ.ಎಂ.ಅನಿಲ್‌ಕುಮಾರ್, ಜಿಲ್ಲಾಧ್ಯಕ್ಷ ಬಿ.ಆನಂದ್, ತಾಲೂಕು ಅಧ್ಯಕ್ಷರುಗಳಾದ ಮಹದೇವು, ಕರಿಯಪ್ಪ, ಸುರೇಶ್, ತಿಮ್ಮೇಶ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ