Friday, November 20, 2026

ಪ್ರಾಯೋಗಿಕ ಆವೃತ್ತಿ

ನಾಳೆ ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ; ಯಾವ್ಯಾವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ….? ಇಲ್ಲಿದೆ ಮಾಹಿತಿ…..

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮೇ 08 ರಂದು ಮಂಡ್ಯ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 11:10 ಗಂಟೆಗೆ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 11.15 ಗಂಟೆಗೆ ಗೆಜ್ಜಲಗೆರೆ ಹೆಲಿಪ್ಯಾಡ್ ನಿಂದ ರಸ್ತೆ ಮೂಲಕ ಸಂಚರಿಸಲಿದ್ದಾರೆ.

ಬೆಳಿಗ್ಗೆ 11:20 ಗಂಟೆಗೆ ಬೆಂಗಳೂರು-ಮೈಸೂರು ಮುಖ್ಯ ರಸ್ತೆಯಲ್ಲಿರುವ ಗಿರಿಜಾ ಟಾಕೀಸ್ ಪಕ್ಕದಲ್ಲಿನ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಕಟ್ಟಡ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 11:45 ಗಂಟೆಗೆ ಮಂಡ್ಯದ ಮೈಷುಗರ್ ಕಾರ್ಖಾನೆ ಆವರಣದಲ್ಲಿ 30 ಮೆಗಾವ್ಯಾಟ್ ಟರ್ಬೋ ಜನರೇಟರ್‌ನ ಪ್ರಾಯೋಗಿಕ ಚಾಲನೆ ನೀಡುವ ಕಾರ್ಯಕ್ರಮ ಹಾಗೂ ಶ್ರೀರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12:15 ಗಂಟೆಗೆ ಶಂಕರನಗರದ ಚಂದಗಾಲು ಲೇಔಟ್ ಬಳಿಯಿರುವ “ಕೆಮ್ಮುಗಿಲು” ಪ್ರಾದೇಶಿಕ ದಿನ ಪತ್ರಿಕೆಯ ಬಹುವರ್ಣ ಮುದ್ರಣ ಯಂತ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

12:30 ಗಂಟೆಗೆ ನಗರದ ಎಂ.ಸಿ. ರಸ್ತೆಯಲ್ಲಿರುವ ಕನಕ ಭವನದಲ್ಲಿ ಮಂಡ್ಯ ಜಿಲ್ಲಾ ಕುರುಬರ ಸಂಘ (ರಿ.) ವತಿಯಿಂದ ಆಯೋಜಿಸಿರುವ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದ್ದಲ್ಲಿ ಭಾಗಹಿಸಲಿದ್ದಾರೆ. ಮಧ್ಯಾಹ್ನ 03:00 ಗಂಟೆಗೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ / ಸಭೆ ನಡೆಸಲಿದ್ದಾರೆ.

ಸಂಜೆ 4:15 ಗಂಟೆಗೆ ಗೆಜ್ಜಲಗೆರೆ ಹೆಲಿಪ್ಯಾಡ್ ತಲುಪಲಿರುವ ಅವರು ಸಂಜೆ 5.55 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣ ತಲುಪಲಿದ್ದಾರೆ ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ