Friday, November 20, 2026

ಪ್ರಾಯೋಗಿಕ ಆವೃತ್ತಿ

ನಾಳೆ ಮಂಡ್ಯಕ್ಕೆ ಕಸಾಪ ಅಧ್ಯಕ್ಷ ಮಹೇಶ್ ಜೋಶಿ

ಮಂಡ್ಯದಲ್ಲಿ 87ನೇ ಸಾಹಿತ್ಯ ಸಮ್ಮೇಳನ ಜರುಗಿದ ಬರೋಬರಿ 5 ತಿಂಗಳ ನಂತರ ಕನ್ನಡ ಸಾಹಿತ್ಯ ಪರಿಷತ್ತಿನ ವಿವಾದಿತ ಅಧ್ಯಕ್ಷ ಡಾ. ಮಹೇಶ್ ಜೋಶಿ ಮೇ 9ರಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಸಂಜೆ 4 ಗಂಟೆಗೆ ಮಂಡ್ಯದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬಿಡುಗಡೆಯಾಗಲಿರುವ ‘ಬೆಲ್ಲದಾರತಿ’ ಸ್ಮರಣ ಸಂಚಿಕೆಯ ಕುರಿತು ಜಿಲ್ಲಾಧಿಕಾರಿಗಳು, ಸ್ಮರಣ ಸಂಚಿಕೆಯ ಅಧ್ಯಕ್ಷರಾದ ಅಪರ ಜಿಲ್ಲಾಧಿಕಾರಿಗಳು, ಸಂಪಾದಕರು ಹಾಗೂ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಡಾ. ಎಚ್. ಎಸ್. ಮುದ್ದೇಗೌಡ ಅವರೊಂದಿಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆಯುವ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕಸಾಪ ಬೈಲಾ ತಿದ್ದುಪಡಿಗೆ ಕೈ ಹಾಕಿರುವ ಮಹೇಶ್ ಜೋಶಿ ನಡೆ ವಿರುದ್ದ ನಾಡಿನಾದ್ಯಂತ ಸಾಹಿತಿಗಳು, ಕವಿಗಳು, ಪ್ರಗತಿಪರರು ಮಹೇಶ್ ಜೋಶಿ ನಡೆ ರಾಜ್ಯದ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿದ್ದು, ಅವರನ್ನು ಕಸಾಪ ಅಧ್ಯಕ್ಷ ಸ್ಥಾನದಿಂದ ವಜಾ ಮಾಡುವಂತೆ ಒತ್ತಡ ಹೇರಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮಂಡ್ಯ ಪ್ರವಾಸ ಕೈಗೊಂಡಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ