ಭಾರತದ ಪ್ರಧಾನಿ ನರೇಂದ್ರ ಮೋದಿ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಯುವಕನೊಬ್ಬನನ್ನು ಕಿರುಗಾವಲು ಪೊಲೀಸರು ಕರೆದು ವಿಚಾರಣೆ ನಡೆಸಿದ್ಧಾರೆ.
ಮಂಡ್ಯದ ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯ ಜಾವೀದ್ ವಿಚಾರಣೆಗೆ ಒಳಗಾದವನು.
ಈತ ಎಐ ತಂತ್ರಜ್ಞಾನ ಬಳಕೆ ಮಾಡಿಕೊಂಡು ಭಾರತ ಪ್ರಧಾನಿ ಅವರ ಅವಹೇಳನಕಾರಿ ಚಿತ್ರ ಸೃಷ್ಠಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.




