Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಹಳೇ ಬೂದನೂರು ಸೊಸೈಟಿ ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಪ್ರತಿಮಾ ಆಯ್ಕೆ

ಮಂಡ್ಯ ತಾಲ್ಲೂಕಿನ ಹಳೇ ಬೂದನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಹೇಶ್ ಬಿ.ಬಿ ಹಾಗೂ ಉಪಾಧ್ಯಕ್ಷರಾಗಿ ಬಿ.ಸಿ.ಪ್ರತಿಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌.

ಭಾನುವಾರ ಮಧ್ಯಾಹ್ನ ಸಂಘದ ಕಚೇರಿಯಲ್ಲಿ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಎನ್‌.ಎಲ್‌.ರವಿ ಹಾಗೂ ಸಂಘದ ಕಾರ್ಯದರ್ಶಿ ಡಿ‌‌‌‌.ಸುರೇಶ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.

2025-30ನೇ ಸಾಲಿನ ಆಡಳಿತ ಮಂಡಳಿಗೆ 10 ನಿರ್ದೇಶಕರು ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಮಹೇಶ್ ಬಿ.ಬಿ ಹಾಗೂ ಉಪಾಧ್ಯಕ್ಷರಾಗಿ ಬಿ.ಸಿ‌.ಪ್ರತಿಮಾ ಹೊರತುಪಡಿಸಿ ಯಾರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿ ಅವಿರೋಧ ಆಯ್ಕೆ ಘೋಷಿಸಿದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಹೇಶ್ ಬಿ.ಬಿ.‌ಮಾತನಾಡಿ, ಸಂಘದ ಅಭಿವೃದ್ಧಿಗೆ ನಿರ್ದೇಶಕರು, ಷೇರುದಾರರ ಸಹಕಾರದಿಂದ ಶ್ರಮಿಸುವುದಾಗಿ ಹೇಳಿದರು.

ಈ ವೇಳೆ ಸಂಘದ ನಿರ್ದೇಶಕರಾದ ಸ್ವಾಮಿ, ಲೋಕೇಶ್, ದಿನೇಶ್, ಸಂಜಯಕುಮಾರ್, ಯಶೋದ, ಶೈಲೇಂದ್ರ ಕುಮಾರ್ ಸೇರಿದಂತೆ ಹಲವರು ಹಾಜರಿದ್ದು ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಹಳೇ ಬೂದನೂರು ಸೊಸೈಟಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಅಕಾಂಕ್ಷಿಗಳ ನಡುವೆ ಜಿದ್ದಾಜಿದ್ದಿ ಉಂಟಾಗಿ 2 ಬಾರಿ ಚುನಾವಣೆ ಮುಂದೂಡಲಾಗಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ