Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಆಪರೇಷನ್ ಅಭ್ಯಾಸ್ ಅಣಕು ಪ್ರದರ್ಶನ : ಅವಘಡದ ಸಂದರ್ಭದಲ್ಲಿ ವ್ಯಕ್ತಿಗಳ ರಕ್ಷಣೆ ಬಗ್ಗೆ ಪ್ರಾತ್ಯಕ್ಷಿಕೆ

ಮಂಡ್ಯ ಜಿಲ್ಲಾಡಳಿತದ ವತಿಯಿಂದ ಇಂದು ಕೆ‌ಆರ್‌ಎಸ್ ನಲ್ಲಿ ಆಪರೇಷನ್ ಅಭ್ಯಾಸ್ ಅಣುಕು ಪ್ರದರ್ಶನವನ್ನು‌ ಏರ್ಪಡಿಸಿ ಬೋಟಿಂಗ್ ಸಂದರ್ಭದಲ್ಲಿ ಅವಘಡ ನಡೆದ ಸಂದರ್ಭದಲ್ಲಿ ಜಿಲ್ಲಾಡಳಿತ, ಪೊಲೀಸ್, ಅಗ್ನಿಶಾಮಕ, ಆರೋಗ್ಯ ಇಲಾಖೆ ಹಾಗೂ ಇನ್ನಿತರೆ ಇಲಾಖೆಗಳು ಸಮನ್ವಯ ಕೆಲಸಗಳು ಹಾಗೂ ಸಾರ್ವಜನಿಕರು ವಹಿಸಬೇಕಾದ ಎಚ್ಚರಿಕೆ ಕುರಿತು ಅಣುಕು ಪ್ರದರ್ಶನವನ್ನು ‌ಅನಾವರಣಗೊಳಿಸಲಾಯಿತು.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಉದ್ಯಾನವನದಲ್ಲಿರುವ ಬೋಟಿಂಗ್ ಪಾಯಿಂಟ್ ನಲ್ಲಿ ಬೋಟ್ ಮಗಚಿಕೊಂಡ ಸಂದರ್ಭದಲ್ಲಿ ಕಂಟ್ರೋಲ್ ರೂಂ ಗೆ ಘಟನೆ ವಿವರ ಬಂದ ತಕ್ಷಣ ಕಂಟ್ರೋಲ್‌ ರೂಂ ನಿಂದ ವಿವಿಧ ಇಲಾಖೆಗಳಿಗೆ ಮಾಹಿತಿ ನೀಡಿ ಎಚ್ಚರಿಸಲಾಯಿತು.

ಅಗ್ನಿಶಾಮಕ ದಳದವರು ಮೊದಲು‌ ನೀರಿನಲ್ಲಿ‌ ಮುಳುಗುತ್ತಿರುವ ವ್ಯಕ್ತಿಗಳ ರಕ್ಷಣೆಗಾಗಿ ತಮ್ಮ ಇಲಾಖೆ ಬೋಟ್, ರಕ್ಷಣಾ ಸಲಕರಣೆಗಳನ್ನು ಬಳಸಿಕೊಂಡು ಮುಳುಗುತ್ತಿರುವ ವ್ಯಕ್ತಿಗಳನ್ನು ದಡಕ್ಕೆ ಕರೆತರುತ್ತಾರೆ‌. ಪೊಲೀಸ್ ಇಲಾಖೆಯವರು ಸಾರ್ವಜನಿಕರನ್ನು ನಿಯಂತ್ರಿಸಲು ಹಾಗೂ ಅಗ್ನಿಶಾಮಕ ಇಲಾಖೆ ವಾಹನಗಳು ಹಾಗೂ ಅಂಬ್ಯೂಲೆನ್ಸ್ ಗಳ ಚಲನ- ವಲನ ಗಳಿಗೆ ತೊಂದರೆಯಾಗದಂತೆ ಬಂದೋಬಸ್ತ್ ಒದಗಿಸುತ್ತಾರೆ.

ಆರೋಗ್ಯ ಇಲಾಖೆ ವತಿಯಿಂದ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಅವಶ್ಯಕವಿರುವವರನ್ನು ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

ಬೆಂಕಿ ಅವಘಡದಿಂದ ರಕ್ಷಣೆ

ಪೊಲೀಸ್ ಗೆಸ್ಟ್ ಹೌಸ್ ನಲ್ಲಿ ಬೆಂಕಿ ಅವಘಡವಾದ ತಕ್ಷಣ ಸೈರನ್ ಶಬ್ದ ಚಾಲನೆ ಮಾಡಿ ಎಚ್ಚರಿಕೆ ನೀಡಲಾಯಿತು. ಕಂಟ್ರೋಲ್‌ ರೂಂಗೆ ವಿಷಯ ರವಾನಿಸಿ ಎಲ್ಲಾ ಇಲಾಖೆಗಳನ್ನು ಎಚ್ಚರಿಸಲಾಯಿತು

ಪೊಲೀಸ್ ಗೆಸ್ಟ್ ಹೌಸ್ ನಲ್ಲಿ ಬೆಂಕಿ ಅನಾಹುತದಲ್ಲಿ ಸಿಲುಕಲಾಗಿದ್ದ ವ್ಯಕ್ತಿಗಳನ್ನು ರಕ್ಷಿಸುವ ಅಣುಕು ಪ್ರದರ್ಶನದಲ್ಲಿ ಮೊದಲನೇ ಮಹಡಿಯಿಂದ ಗಯಾಳುಗಳನ್ನು ಕೆಳಗೆ ಇಳಿಸಿ ಚಿಕಿತ್ಸೆ ನೀಡುವುದು ವಿಶೇಷವಾಗಿತ್ತು‌

ಬಾಂಬ್ ಸ್ಪೋಟದ ಅವಘಡ

ಬಾಂಬ್ ಸ್ಪೋಟ್ ವಾದ ತಜ್ಷಣ ಸೈರನ್ ಮೂಲಕ ಎಚ್ಚರಿಕೆ ನೀಡಿ ಕಂಟ್ರೋಲ್‌ ರೂಂಗೆ ವಿಷಯ ರವಾನಿಸಿ ಎಲ್ಲಾ ಇಲಾಖೆಗಳಿಗೆ ಕ್ರಮಕ್ಕೆ‌ ಮಾಹಿತಿ ನೀಡಲಾಯಿತು‌. ಬಾಂಬ್ ನಿಷ್ಕ್ರಿಯ ತಂಡ ಶ್ವಾನ ದಳದೊಂದಿಗೆ ಆಗಮಿಸಿ ಉದ್ಯಾನವನದ ಪರಿಶೀಲನೆ ಪ್ರಾರಂಭಿಸಲಾಯಿತು‌.

ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಎನ್.ಸಿ.ಸಿ ವಿದ್ಯಾರ್ಥಿಗಳು, ಅಪಘಾತಕ್ಕೀಡದವರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದರೆ. ವೈದ್ಯರ ತಂಡ ಪ್ರಥಮ ಚಿಕಿತ್ಸೆ ನೀಡುವ ಕಾರ್ಯದಲ್ಲಿ ತೊಡಗಲಾಯಿತು‌.

ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆಯಲ್ಲಿ ಯಾವುದೇ ಲೋಪವಾಗದಂತೆ ನಿಗಾ ವಹಿಸಿದರು.

ಅಣುಕು ಪ್ರದರ್ಶನದಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಗಂಗಾಧರ್, ಅಗ್ನಿಶಾಮಕ ಅಧಿಕಾರಿ ರಾಘವೇಂದ್ರ, ಉಪವಿಭಾಗಾಧಿಕಾರಿ ಶಿವಮೂರ್ತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಆರೋಗ್ಯ, ಪೊಲೀಸ್, ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಎನ್‌.ಎಸ್.ಎಸ್ ವಿದ್ಯಾರ್ಥಿಗಳು, ಗೃಹರಕ್ಷಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ