ವಿಮೋಚನ ಮಹಿಳಾ ಹಕ್ಕುಗಳ ವೇದಿಕೆ, ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ‘ಒಡಲ ತುಡಿತಕ್ಕೆ ಕೇಡು’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮೇ 14ರ ಬೆಳಿಗ್ಗೆ 11 ಗಂಟೆಗೆ ಮಂಡ್ಯನಗರದ ಜೆ.ಎಲ್.ಜವರೇಗೌಡ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ರಮಾನಂದ್ ತಿಳಿಸಿದರು.
ಮಂಡ್ಯದಲ್ಲಿ ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಡಲ ತುಡಿತಕ್ಕೆ ಕೇಡು ಹೆಣ್ಣುಭ್ರೂಣ ಹತ್ಯೆ – ಒಂದು ಅಧ್ಯಯನ ಪುಸ್ತಕವು ಎರಡನೇ ಬಾರಿಗೆ ಬಿಡುಗಡೆಗೊಳ್ಳುತ್ತಿದೆ ಎಂದರು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸುವರು, ಡಿಹೆಚ್‌ಓ ಡಾ.ಕೆ.ಮೋಹನ್ ಅಧ್ಯಕ್ಷತೆ ವಹಿಸಲಿದ್ದು, ರೈತ ಮತ್ತು ಮಹಿಳಾ ಮುಖಂಡರಾದ ಸುನಂದ ಜಯರಾಮ್ ಪುಸ್ತಕ ಬಿಡುಗಡೆ ಮಾಡುವರು. ಅಕ್ಕ ಮಹಾದೇವಿ ಮಹಿಳಾ ವಿವಿಯ ವಿಶೇಷ ಅಧಿಕಾರಿ ಹೇಮಲತಾ ಹೆಚ್.ಎಂ ಪುಸ್ತಕದ ಕುರಿತು ಮಾತನಾಡಲಿದ್ದು, ವಿಶೇಷ ಆಹ್ವಾನಿತರಾಗಿ ಜಿ.ಪಂ ಸಿಇಓ ನಂದಿನಿ ಕೆ.ಆರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ವಿಮೋಚನ ಮಹಿಳಾ ಸಂಘಟನೆಯ ಕಾರ್ಯದರ್ಶಿ ಸಲಿನ್ ಸುಗುಣ, ಪುಸ್ತಕದ ಲೇಖಕ ಡಾ.ಮಂಜುನಾಥ ಅದ್ದೆ ಭಾಗವಹಿಸುರುವರು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ.ಬೆಟ್ಟಸ್ವಾಮಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್.ನವೀನ್‌ಕುಮಾರ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯರ ಸಂಘದ ಅಧ್ಯಕ್ಷ ಡಾ.ಮನೋಹರ್, ಎಂ.ಓ.ಬಿ ಸಂಸ್ಥೆಯ ನಿರ್ದೇಶಕ ಅಸುಂತ, ಮಹಿಳಾ ಮುನ್ನಡೆಯ ಕಾರ್ಯದರ್ಶಿ ಪೂರ್ಣಿಮ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ ಪಾಲ್ಗೊಳ್ಳುವರು ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಸಲಿನ್ ಸುಗುಣ, ವಿನೋಧ, ಪೂರ್ಣಿಮ, ಶಿಲ್ಪ, ಜನಾರ್ಧನ್, ಇಂಪನ ಇದ್ದರು.




