ಮಂಡ್ಯ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಗಳಿಗೆ ಮಂಡ್ಯ ಜಿಲ್ಲಾ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಂಗಳವಾರ ಖಡಕ್ ವಾರ್ನಿಂಗ್ ನೀಡಿದರು.
ಮಂಡ್ಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯ ರೌಡಿ ಆಸಾಮಿಗಳನ್ನು ಕರೆಸಿ ಅವರೆಲ್ಲರಿಗೂ ಯಾವುದೇ ರೀತಿಯ ಕಾನೂನುಬಾಹಿರ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಯಿತು. ಅಲ್ಲದೇ ರೌಡಿ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆಯುಳ್ಳವರ ಮೇಲೆ ಹದ್ದಿನ ಕಣ್ಣಿಡುವಂತೆ ಪೊಲೀಸ್ ಸಿಬ್ಬಂದಿ ಸೂಚಿಸಲಾಯಿತು.




