ಮೇ 15 ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ದಿನವಾಗಿದೆ. ಆದರೆ ಈ ಬಾರಿ ಹುಟ್ಟುಹಬ್ಬ ಆಚರಣೆಯಿಂದ ದೂರವಿರಲು ಡಿ.ಕೆ.ಶಿವಕುಮಾರ್ ಅವರು ನಿರ್ಧರಿಸಿದ್ದು, ಅಭಿಮಾನಿಗಳಿಗೂ ಮನವಿ ಮಾಡಿದ್ದಾರೆ.
ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತೇನೆ. ನಿಮ್ಮ ಆಶೀರ್ವಾದ ಸದಾ ಹೀಗೆ ಇರಲಿ, ಅದುವೇ ನನಗೆ ಶ್ರೀರಕ್ಷೆ ಎಂದು ಡಿ ಕೆ ಶಿವಕುಮಾರ್ ‘ಎಕ್ಸ್’ ನಲ್ಲಿ ಬರೆದುಕೊಂಡಿದ್ದಾರೆ.
ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತೇನೆ.
ನಿಮ್ಮ ಆಶೀರ್ವಾದ ಸದಾ ಹೀಗೆ ಇರಲಿ, ಅದುವೇ ನನಗೆ ಶ್ರೀರಕ್ಷೆ.
ನಿಮ್ಮ ಡಿ ಕೆ ಶಿವಕುಮಾರ್ pic.twitter.com/UYKMf7Wb6I
— DK Shivakumar (@DKShivakumar) May 14, 2025
“>
ಒಂದೊಮ್ಮೆ ಯಾರಾದರೂ ನನ್ನ ಜನ್ಮದಿನಕ್ಕೆ ಹಾರೈಸಿ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಬ್ಯಾನರ್ಗಳನ್ನು ಹಾಕಿದ್ದರೆ ಅವುಗಳ ತೆರವಿಗೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮೇ 15 ರಂದು ವೈಯಕ್ತಿಕ ಕಾರಣಗಳಿಂದ ಬೆಂಗಳೂರಿನಲ್ಲಿ ಇರುವುದಿಲ್ಲ. ಕಾಂಗ್ರೆಸ್ ಸರ್ಕಾರದ ಎರಡನೇ ವರ್ಷದ ಸಾಧನಾ ಸಮಾವೇಶದ ಸ್ಥಳ ಪರಿಶೀಲನೆಗೆ ವಿಜಯನಗರಕ್ಕೆ ತೆರಳುತ್ತಿರುವುದರಿಂದ ಮೇ 16 ರ ಸಂಜೆಯವರೆಗೂ ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಿಲ್ಲ. ದಯವಿಟ್ಟು ಇದನ್ನು ಅನ್ಯಥಾ ಭಾವಿಸದೆ, ಸಹಕರಿಸಬೇಕಾಗಿ ಅಭಿಮಾನಿಗಳು ಹಾಗೂ ಹಿತೈಷಿಗಳಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಅವರು ತಿಳಿಸಿದ್ದಾರೆ.




