Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನ್ಮದಿನ ಆಚರಣೆ

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜನ್ಮದಿನ ಆಚರಣೆಯನ್ನು ಮಂಡ್ಯ ನಗರದಲ್ಲಿ ಕೆಪಿಸಿಸಿ ಸದಸ್ಯ ಹಾಗೂ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಡ್ಯ ಸಂದೀಪ್ ಗೌಡ ನೇತೃತ್ವದಲ್ಲಿ ವಿವಿಧ ಸೇವಾ ಕಾರ್ಯಗಳ ಮೂಲಕ ಸರಳವಾಗಿ ಆಚರಿಸಲಾಯಿತು.

ಮಂಡ್ಯ ನಗರದ ಜೆ.ಸಿ. ವೃತ್ತದಲ್ಲಿ ಜಮಾವಣೆಗೊಂಡ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಮುಖಂಡರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕೇಕ್ ಕತ್ತರಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು. ಬಳಿಕ ಜಿಲ್ಲಾ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಹಾಡ್ಯ ಸಂದೀಪ್ ಗೌಡ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆನ್ನುವುದು ನಮ್ಮೆಲ್ಲರ ಆಶಯವಾಗಿದೆ.

ಒಬ್ಬ ರೈತನ ಮಗ ಡಿ.ಕೆ.ಶಿವಕುಮಾರ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸಿದ್ದಾರೆ,ವಿವಿಧ ಖಾತೆಯ ಸಚಿವರಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.ಅವರು ಮುಖ್ಯಮಂತ್ರಿ ಆಗಬೇಕೆನ್ನುವುದು ಕಾಂಗ್ರೆಸ್ ಕಾರ್ಯಕರ್ತರ ಅಭಿಲಾಷೆಯಾಗಿದೆ. ಹೈ ಕಮಾಂಡ್ ನಾಯಕರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ರಚನೆಯಾಗಿ ಎರಡು ವರ್ಷಗಳು ಪೂರ್ಣವಾಗಲಿದ್ದು, ಡಿಸೆಂಬರ್ ವೇಳೆಗೆ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡದಿದ್ದರೆ, ಒಕ್ಕಲಿಗ ಸಮಾಜ, ಸಮುದಾಯ ತೀವ್ರತರನಾದ ಪ್ರತಿಭಟನೆ ಮಾಡಲಿದೆ ಎಂದರು.

ಈ ಸಂದರ್ಭದಲ್ಲಿ ಮನ್ಮುಲ್ ನಿರ್ದೇಶಕ ಯು.ಸಿ‌.ಶಿವಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಎಸ್. ಚಿದಂಬರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಲಹಳ್ಳಿ ಅಶೋಕ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ತಾ.ಪಂ.ಮಾಜಿ ಸದಸ್ಯ ಪ್ರಶಾಂತ್ ಬಾಬು, ಶುಭದಾಯಿನಿ, ನಾಗರತ್ನ, ಗಾಂಧಿನಗರ ಅಮೀದ್, ಸಿ.ಎಂ ದ್ಯಾವಪ್ಪ, ಅಭಿಲಾಶ್, ಉಮೇಶ್, ಗುರು, ಸಂಪತ್, ಹೇಮಂತ್ ಬಾಬು ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ