Friday, November 20, 2026

ಪ್ರಾಯೋಗಿಕ ಆವೃತ್ತಿ

ವೈದ್ಯಕೀಯ ಕ್ಷೇತ್ರದಲ್ಲಿ ಡ್ರೋನ್ ಬಳಕೆ ಐತಿಹಾಸಿಕ ಕಾರ್ಯ: ಡಾ.ಕೃಷ್ಣ

ವೈದ್ಯಕೀಯ ಕ್ಷೇತ್ರದ ತುರ್ತು ಸಂದರ್ಭಗಳಲ್ಲಿ ಡ್ರೋನ್ ಗಳ ಬಳಕೆ ಒಂದು ಐತಿಹಾಸಿಕ ಕಾರ್ಯವಾಗಿದೆ ಎಂದು ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಹೇಳಿದರು.

ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆಯ ಸಭಾಂಗಣದಲ್ಲಿ ಐಕಾಟ್ (ICATT) ಸಂಸ್ಥೆ ವತಿಯಿಂದ ಇಂದು ಆಯೋಜಿಸಿದ್ದ ಮೆಡಿಕಲ್ ಡ್ರೋನ್ ಡ್ರಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಡ್ರೋನ್ ಗಳನ್ನು ಔಷದಿ ಸಿಂಪಡಿಸುವಿಕೆ, ಗೊಬ್ಬರ, ಫರ್ಟಿಲೈಸರ್ಸ್ ಗಳನ್ನು ಹಾಕಲು ಕೃಷಿ ಕ್ಷೇತ್ರದಲ್ಲಿ ಹೆಚ್ಚಾಗಿ ಉಪಯೋಗಿಸಲಾಗುತ್ತಿದೆ ಎಂದರು.

ಐಕಾಟ್ (ICATT) ಸಂಸ್ಥೆಯವರು ತುರ್ತು ಆರೋಗ್ಯ ಸೇವೆಗಳನ್ನು ಡ್ರೋನ್ ಮೂಲಕ ಒದಗಿಸಬಹುದು ಎಂಬುದನ್ನು ವಿನೂತನ ಪ್ರಯೋಗದ ಮೂಲಕ ಜಗತ್ತಿನ ಪರಿಚಯಿಸಲು ಹೊರಟಿದ್ದಾರೆ, ತುರ್ತಾಗಿ ನೀಡಬೇಕಾದ ವೈದ್ಯಕೀಯ ಡ್ರಗ್ಸ್ ಅನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಎಲ್ಲಿಯೂ ತಡಮಾಡದೆ ಅಗತ್ಯವಿರುವ ರೋಗಿ ನೀಡಿ ಪ್ರಾಣ ಉಳಿಸಬಹುದಾದ ಈ ಕಾರ್ಯ ವೈದ್ಯಕೀಯ ಕ್ಷೇತ್ರದಲ್ಲಿ ಮಾರ್ಪಾಡು ತರುತ್ತದೆ ಎಂದು ಹೇಳಿದರು.

ಎಷ್ಟೋ ತುರ್ತು ಸನ್ನಿವೇಶಗಳಲ್ಲಿ ರೋಗಿಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗದೆ ಅಥವಾ ಸರಿಯಾದ ಸಮಯಕ್ಕೆ ಔಷಧಿ ದೊರೆಯದೇ ರೋಗಿಗಳು ತಮ್ಮ ಉಸಿರು ಚಲ್ಲುವ ಅನಿವಾರ್ಯ ಉಂಟಾಗಿದೆ, ಸ್ಥಳೀಯ ಆರೋಗ್ಯ ಕೇಂದ್ರಗಳಿಗೆ ಡ್ರೋನ್ ಮೂಲಕ ಅಗತ್ಯ ಔಷಧಿಗಳನ್ನು ಕಳಿಸುವುದರಿಂದ ಇಂತಹ ಅನೇಕ ಸಾವು ನೋವುಗಳನ್ನು ತಡೆಗಟ್ಟಬಹುದಾಗಿದೆ, ತುರ್ತು ಸಂದರ್ಭಗಳಲ್ಲಿ ಡ್ರೋನ್ ಗಳ ಬಳಕೆ ವೈದ್ಯಕೀಯ ಕ್ಷೇತ್ರದಲ್ಲಿ ಮೈಲುಗಲ್ಲು ಆಗಬಹುದು ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಡ್ರೋನ್ ಗಳ ಬಳಕೆ ಪೊಲೀಸ್ ಇಲಾಖೆಗೂ ಅತ್ಯವಶ್ಯಕ, ತುರ್ತಾಗಿ ಆರೋಗ್ಯ ಸೇವೆ ಅಗತ್ಯವಿದ್ದಾಗ ಅಂಬ್ಯುಲೆನ್ಸ್ ಗಳಿಗೆ ಜೀರೋ ಕ್ಲಿಯರೆನ್ಸ್ ನೀಡಬೇಕಾಗುತ್ತದೆ, ದೊಡ್ಡ ದೊಡ್ಡ ನಗರಗಳಲ್ಲಿ ಕಡಿಮೆ ಸಮಯದಲ್ಲಿ ರಸ್ತೆಗಳನ್ನು ಜೀರೋ ಕ್ಲಿಯರೆನ್ಸ್ ಮಾಡುವುದು ಕಷ್ಟಕರವಾಗುತ್ತದೆ ಹಾಗೂ ನಿರ್ದಿಷ್ಟ ಸಮಯದಲ್ಲಿ ಔಷಧಿ ದೊರೆಯದೇ ಹೋದರೆ ಸಾವು ಸಂಭವಿಸುವ ಸಾಧ್ಯತೆ ಹೆಚ್ಚು ಇರುತ್ತದೆ ಎಂದರು.

ಆದರೆ ಇಂತಹ ತುರ್ತು ಸಂದರ್ಭಗಳಲ್ಲಿ ಡ್ರೋನ್ ಗಳನ್ನು ಬಳಸಿಕೊಳ್ಳುವುದರಿಂದ ಯಾವುದೇ ರೀತಿಯ ಸಮಯ ವ್ಯರ್ಥವಾಗದೆ ಸೂಕ್ತ ಸಮಯದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಬಹುದಾಗಿದೆ, ವೈದ್ಯಕೀಯ ಕ್ಷೇತ್ರದಲ್ಲಿ ಡ್ರೋನ್ ಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡರೆ ಇದೊಂದು ಮಹತ್ವದ ಸಾಧನೆಯಾಗಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ ಕೆ ಮೋಹನ್, ಜಿಲ್ಲಾ ವೈದ್ಯಕೀಯ ಅಧೀಕ್ಷಕರಾದ ಡಾ. ಶಿವಕುಮಾರ್, ಐಕಾಟ್ (ICATT) ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ. ಶಾಲಿನಿ ನಲ್ವಾಡ್, ಡಾ. ಚೇತನ್, ಅಂಬರ್ ವಿಂಗ್ಸ್ ಸಂಸ್ಥೆಯ ದಿವ್ಯ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ