ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಮೇ 21 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 11:30 ಗಂಟೆಗೆ ಜಿಲ್ಲೆಯ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸಿ.ಎಸ್.ಆರ್ ಅನುದಾನದಡಿ ನಿರ್ಮಿಸಲಾಗಿರುವ ಆರೋಗ್ಯ ಧಾಮ ಮತ್ತು ಹೈಟೆಕ್ ಶೌಚಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12:30 ಗಂಟೆಗೆ ಜಿಲ್ಲಾ ಪಂಚಾಯತ್ನಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3:30 ಗಂಟೆಗೆ ಮದ್ದೂರು, ಚನ್ನಪಟ್ಟಣ, ರಾಮನಗರ ಮತ್ತು ಬಿಡದಿ ಮಾರ್ಗವಾಗಿ ಕೇಂದ್ರಸ್ಥಾನ ಬೆಂಗಳೂರು ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




