Tuesday, November 24, 2026

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ಶಾಲೆಯ ಎಲ್.ಕೆ. ಜಿ ಪ್ರವೇಶಕ್ಕೆ ನೂಕು ನುಗ್ಗಲು : ಮುಂಜಾನೆ 4 ಗಂಟೆಗೆ ಸರದಿ ಸಾಲಿನಲ್ಲಿ ನಿಂತ ಪೋಷಕರು!

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ( ಕೆಪಿಎಸ್) ಯಲ್ಲಿ ಎಲ್.ಕೆ. ಜಿ ಪ್ರವೇಶಕ್ಕೆ ನೂಕು ನುಗ್ಗಲು ಉಂಟಾಗಿದೆ. ಅಲ್ಲದೇ ಪೋಷಕರು ಮುಂಜಾನೆ 4 ಗಂಟೆಗೆ ಎದ್ದು ಬಂದು ಸರದಿಯ ಸಾಲಿನಲ್ಲಿ ನಿಂತು ಅರ್ಜಿ ಪಡೆಯಲು ಮುಂದಾದ ಅಚ್ಚರಿಯ ಘಟನೆ ಬುಧವಾರ ನಡೆದಿದೆ.

ಮಂಡ್ಯ ಜಿಲ್ಲೆಯಲ್ಲಿಯೇ ಮಾದರಿ ಸರ್ಕಾರಿ ಶಾಲೆಯಾಗಿ ಹೊರಹೊಮ್ಮಿರುವ ಕೃಷ್ಣರಾಜಪೇಟೆ ತಾಲೂಕಿನ ಪ್ರತಿಷ್ಟಿತ ಸರ್ಕಾರಿ ಶಾಲೆಯಾಗಿರುವ ಕೆಪಿಎಸ್ ಶಾಲೆಯಲ್ಲಿ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಂತೆ ಎರಡೂವರೆ ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಇಂದಿಗೂ ಶಾಲೆಯಲ್ಲಿ ಪ್ರವೇಶ ಪಡೆಯಲು ಹಲವು ಮಕ್ಕಳು ಹರಸಾಹಸ ಮಾಡುತ್ತಿದ್ದಾರೆ.

ಎಲ್.ಕೆ.ಜಿ ಪ್ರವೇಶಕ್ಕೆ ಕೇವಲ 60 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಿರುವುದರಿಂದ ಎಲ್ಲಾ ಮಕ್ಕಳಿಗೆ ಶಾಲೆಗೆ ಪ್ರವೇಶ ದೊರೆಯುತ್ತಿಲ್ಲ, ಆದ್ದರಿಂದ ಕನಿಷ್ಠ 150 ವಿದ್ಯಾರ್ಥಿಗಳಿಗಾದರೂ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪೋಷಕರು ಪ್ರಾಂಶುಪಾಲ ಡಿ. ಬಿ.ಸತ್ಯ ಅವರಲ್ಲಿ ಮನವಿ ಮಾಡಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಡಿ. ಬಿ.ಸತ್ಯ ಮಾತನಾಡಿ ಕೆಪಿಎಸ್ ಶಾಲೆಯು ಗುಣ ಮಟ್ಟದ ಶಿಕ್ಷಣಕ್ಕೆ ಹೆಸರುವಾಸಿ ಯಾಗಿರುವುದರಿಂದ ಕೆಪಿಎಸ್ ಶಾಲೆಯಲ್ಲಿ ಪ್ರವೇಶ ಪಡೆಯಲು ಇಂದಿಗೂ ಭಾರೀ ಒತ್ತಡವಿದೆ. ನಮ್ಮ ಸರ್ಕಾರಿ ಶಾಲೆಯ ಮೇಲೆ ಪೋಷಕರು ಇಟ್ಟಿರುವ ಪ್ರೀತಿ ಹಾಗೂ ಅಭಿಮಾನಕ್ಕೆ ತಾವು ಕೃತಜ್ಞತೆ ಸಮರ್ಪಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡ ಮರುವನಹಳ್ಳಿ ಶಂಕರ್, ಮುಖಂಡರಾದ ಟಿ. ವೈ.ಆನಂದ್, ನಾಗರತ್ನ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ