Saturday, November 21, 2026

ಪ್ರಾಯೋಗಿಕ ಆವೃತ್ತಿ

ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀಕನ್ ಗ್ರಂಥಾಲಯ ಪ್ರಾರಂಭಿಸಲು ಕ್ರಮ : ನಂದಿನಿ

ಗ್ರಂಥಾಲಯಗಳು ಸಮುದಾಯ ಕಲಿಕಾ ಕೇಂದ್ರಗಳಂತೆ ಕಾರ್ಯನಿರ್ವಹಿಸುತ್ತಿದ್ದು ಮಹಿಳೆಯರು, ಮಕ್ಕಳು, ಯುವಕ ಯುವತಿಯರು ಮತ್ತು ವೃದ್ಧರು ಕಲಿಕೆಯತ್ತ ತಮ್ಮ ಗಮನವನ್ನು ಕೇಂದ್ರೀಕರಿಸಲು ಸಹಕಾರಿಯಾಗಿವೆ. ಮುಂದಿನ ಒಂದು ವರ್ಷ ಅವಧಿಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಬೀಕನ್ ಗ್ರಂಥಾಲಯಗಳನ್ನು ಪ್ರಾರಂಭಿಸಲು ಕ್ರಮವಹಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದಿನ ತರಬೇತಿ ಕಾರ್ಯಾಗಾರ ಮೊದಲ ಹೆಜ್ಜೆಯಾಗಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಕೆ.ಆರ್. ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಪುನಶ್ಚೇತನ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೊದಲಿಗೆ ಜಿಲ್ಲೆಯ ಎಲ್ಲಾ ಗ್ರಂಥಾಲಯಗಳ ಸಮೀಕ್ಷೆ ನಡೆಸಲಾಗುವುದು. ನಂತರ ಅವುಗಳ ಅವಶ್ಯಕತೆಗೆ ಅನುಗುಣವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲಾಗುವುದು. ಹಂತ ಹಂತವಾಗಿ ಗ್ರಂಥಾಲಯಗಳಲ್ಲಿ ಬೀಕನ್ ಸೌಲಭ್ಯವನ್ನು ಕಲ್ಪಿಸಲು ಕ್ರಿಯಾ ಯೋಜನೆ ಸಿದ್ದಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಗ್ರಂಥಾಲಯ ಮೇಲ್ವಿಚಾರಕರು ಕ್ಷಮತೆ, ದಕ್ಷತೆ ಮತ್ತು ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಗ್ರಾಮಾಂತರ ಪ್ರದೇಶದಲ್ಲಿ ಬದಲಾವಣೆ ತರಲು ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಯಿಂದ ಮಾತ್ರ ಸಾಧ್ಯವಿದ್ದು, ಇದರಲ್ಲಿ ಗ್ರಂಥಾಲಯಗಳು ಮೂಲ ಕೇಂದ್ರ ಬಿಂದುವಿನಂತೆ ಕೆಲಸ ನಿರ್ವಹಿಸುತ್ತಿವೆ. ಗ್ರಾಮಾಂತರ ಪ್ರದೇಶದ ಮಹಿಳೆಯರು, ಮಕ್ಕಳು, ವೃದ್ಧರು, ಅಂಗವಿಕಲರು, ನಿರುದ್ಯೋಗಿ ಯುವಕ ಯುವತಿಯರು ಗ್ರಾಮ ಪಂಚಾಯತ್ ನಲ್ಲಿ ಲಭ್ಯವಿರುವ ಗ್ರಂಥಾಲಯಗಳನ್ನು ಸದ್ಬಳಕೆ ಮಾಡಿಕೊಂಡು ಅವರ ಕೌಶಲ್ಯ ಮತ್ತು ಶಿಕ್ಷಣದ ಮಟ್ಟವನ್ನು ಅಭಿವೃದ್ಧಿಪಡಿಸಿಕೊಳ್ಳಬಹುದಾಗಿರುತ್ತದೆ. ಆದ್ದರಿಂದ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಮೇಲ್ವಿಚಾರಕರು ತಮ್ಮ ಕಾರ್ಯನಿರ್ವಹಣಾ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಈ ರೀತಿಯ ತರಬೇತಿಗಳು ಅತ್ಯವಶ್ಯಕ ಎಂದು ಅಭಿಪ್ರಾಯಪಟ್ಟರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಅಂಧ ಮತ್ತು ಕಿವುಡ ವಿಧ್ಯಾರ್ಥಿಗಳಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆ ನಡೆಸುತ್ತಿರುವವರಿಗೆ ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿನ ಗ್ರಂಥಾಲಯಗಳಲ್ಲಿ ಬೀಕನ್ ಗ್ರಂಥಾಲಯ ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಮಂಡ್ಯ ಜಿಲ್ಲಾ ಪಂಚಾಯತ್ ಮೊದಲ ಹೆಜ್ಜೆ ಇಟ್ಟಿದ್ದು, ಅಜೀಂ ಪ್ರೇಂಜೀ ಫೌಂಡೇಷನ್ ನ ಸಹಯೋಗದೊಂದಿಗೆ ಬೀಕನ್ ಗ್ರಂಥಾಲಯಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಕಾರ್ಯಗಾರದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಾಬು, ಲಕ್ಷ್ಮಿ ) ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ