ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ. ರಮೇಶ ಬಂಡಿಸಿದ್ದೇಗೌಡ ಅವರು ಪ್ರತಿನಿತ್ಯ ಜನರ ಕಷ್ಟ ಕಾರ್ಪಣ್ಯ ಗಳಿಗೆ ಸ್ಪಂದಿಸುವ ಮೂಲಕ ಬಡಜನರ ಸೇವೆ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ಧಿ ಗೋಸ್ಕರ ಸಾವಿರಾರು ಕೋಟಿ ಅನುದಾನ ತಂದು ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ತಿಳಿಸಿದರು.
ಶಾಸಕ ರಮೇಶ ಬಂಡಿಸಿದ್ದೇಗೌಡರ ಹುಟ್ಟುಹಬ್ಬದ ಅಂಗವಾಗಿ ಅವರ ಹಿತೈಷಿಗಳು ಹಾಗೂ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಮಂಡ್ಯನಗರದ ವಿದ್ಯಾಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಉಪಹಾರ ವಿತರಣೆ ಮಾಡಿ, ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿ ಮಾತನಾಡಿದರು.

ರಮೇಶ ಬಂಡಿಸಿದ್ದೇಗೌಡ ಅವರು ಶ್ರೀರಂಗಪಟ್ಟಣ ಕ್ಷೇತ್ರದಾದ್ಯಂತ ರಸ್ತೆಗಳು, ಚರಂಡಿ,ನೀರಾವರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಲುವೆಗಳು, ಕಾಲುವೆಗಳ ದುರಸ್ತಿ ಕೆರೆಕಟ್ಟೆಗಳ ಅಭಿವೃದ್ಧಿ, ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ತಮ್ಮದೇ ಆದ ಸೇವೆ ಮಾಡುವ ಮೂಲಕ ಅನುದಾನ ತಂದು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮಿತ್ರ ಮಾತನಾಡಿ ಸರಳ ಸಜ್ಜನಿಕೆಗೆ ಹೆಸರುವಾಸಿಯಾಗಿರುವ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿ ಸಿದ್ದೇಗೌಡ ಅವರಿಗೆ ಮುಂದಿನ ಸಚಿವ ಸಂಪುಟದ ಪುನರ್ ರಚನೆ ವೇಳೆ ಸಚಿವ ಸ್ಥಾನ ಸಿಗಲಿ ಎಂದು ಶುಭ ಕೋರಿದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಂಜುನಾಥ್, ಗುತ್ತಿಗೆದಾರ ಸೂನಗಹಳ್ಳಿ ಸುರೇಶ್, ಕಾಂಗ್ರೆಸ್ ಮುಖಂಡರಾದ ಕಾಳಪ್ಪ, ರಾಜಣ್ಣ, ಕಾಳೇನಹಳ್ಳಿ ಮಂಜುನಾಥ್, ರವಿಕುಮಾರ್, ಯಶೋಧ, ಕಿಟ್ಟಿ, ಎಂ.ಕೆ.ಮಧು, ಬಸವರಾಜ್, ದ್ಯಾವಣ್ಣ ಇತರರು ಹಾಜರಿದ್ದರು




