Thursday, November 19, 2026

ಪ್ರಾಯೋಗಿಕ ಆವೃತ್ತಿ

ರಾಜ್ಯದಲ್ಲಿ 35 ಕೋವಿಡ್ ಪಾಸಿಟಿವ್ ಪ್ರಕರಣ : ಆತಂಕ ಪಡುವ ಅಗತ್ಯವಿಲ್ಲ ಎಂದ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ 35 ಜನರು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಬೆಂಗಳೂರಿನಲ್ಲಿಯೇ 32 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು ಮಾತನಾಡಿದ ಅವರು ಕೋವಿಡ್ ಬಂದಿದೆ ಎಂದು ಜನ ಆತಂಕ ಪಡುವ ಅಗತ್ಯವಿಲ್ಲ.‌ ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಈಗಾಗಲೇ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದರು.

ಕೋವಿಡ್ ತಾಂತ್ರಿಕ ಸಮಿತಿ ನಿನ್ನೆ ಸಭೆ ನಡೆಸಿ ರಾಜ್ಯದಲ್ಲಿ ಕಂಡುಬಂದಿರುವ ಕೋವಿಡ್ ಪ್ರಕರಣಗಳನ್ನು ಕುರಿತು ಚರ್ಚೆ ನಡೆಸಿದೆ. ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ. ದೇಶದಲ್ಲಿ ಒಟ್ಟು 257 ಪ್ರಕರಣ ದಾಖಲಾಗಿವೆ. ಕೋವಿಡ್ ಪಾಸಿಟಿವ್ ಹೊಂದಿದವರಿಗೆ ಅಲ್ಪ ಪ್ರಮಾಣದ ಗುಣಲಕ್ಷಣಗಳು ಕಂಡು ಬಂದಿದ್ದು, ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ. ಉಸಿರಾಟದ ತೊಂದರೆ ಇರುವವರಿಗೆ, SARI ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರು ದಾಖಲಾಗಿರುವ ಆಸ್ಪತ್ರೆಗಳಲ್ಲಿ ಮಾದರಿ ಸಂಗ್ರಹಿಸಿ  ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬಾಣಂತಿಯರು, ಜನ ಹೆಚ್ಚಿರುವ ಕಡೆ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ. ಯಾರೊಬ್ಬರೂ ಭಯ ಪಡುವ ಅಗತ್ಯವಿಲ್ಲ. ಇಲಾಖೆಯ ಮಾರ್ಗಸೂಚೊಯಂತೆ ಮುಂಜಾಗ್ರತೆ ವಹಿಸಿದರೆ ಸಾಕು. ತಕ್ಷಣಕ್ಕೆ ಮಾಸ್ಕ್ ಎಲ್ಲರಿಗೂ ಕಡ್ಡಾಯ ಮಾಡಿಲ್ಲ. ಬಾಣಂತಿಯರು, ಗರ್ಭಿಣಿಯರು ಧರಿಸಬೇಕು ಎಂದು ಸೂಚಿಸಲಾಗಿದೆ. ಸ್ವಚ್ಛತೆ ಕಾಪಾಡಿಕೊಂಡು ಸ್ಯಾನಿಟೈಸರ್ ಬಳಸುವುದು ಉತ್ತಮ. ಸಾರ್ವಜನಿಕರು ಪ್ರಯಾಣ ಮಾಡಲು ಯಾವುದೇ ಅಡ್ಡಿಯಿಲ್ಲ. ಎಲ್ಲರು ಸಹಜ ಜೀವನ ನಡೆಸಬಹುದು. ಮಾಧ್ಯಮಗಳು ಆತಂಕ ಸೃಷ್ಟಿಸುವುದು ಬೇಡ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಧ್ಯಮಗಳಿಂದ ಆಗಲಿ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಒಂದು ತಿಂಗಳಿಗೆ ಅಗತ್ಯವಿರುವಷ್ಟು ಟೆಸ್ಟಿಂಗ್ ಕಿಟ್ ಗಳನ್ನ ಸಂಗ್ರಹಿಸಲು ಸೂಚಿಸಲಾಗಿದೆ. ಅಗತ್ಯವಿದ್ದಾಗ ಮಾತ್ರ ಟೆಸ್ಟ್ ಮಾಡಲಾಗುವುದು. ಬೆಂಗಳೂರಿನಲ್ಲಿ 32 ಕೋವಿಡ್ ಪಾಸಿಟಿವ್ ಪ್ರಕರಣಗಳಿದ್ದು, ಕಳೆದ ಒಂದು ವಾರದಲ್ಲಿ ಕೊಂಚ ಏರಿಕೆ ಕಂಡಿದೆ. ಸದ್ಯಕ್ಕೆ ಕೋವಿಡ್ ವಿಚಾರದಲ್ಲಿ ಆತಂಕಪಡುವ ಸ್ಥಿತಿ ಇಲ್ಲ ಎಂದು ಅವರು ತಿಳಿಸಿದ್ದಾರೆ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ