Saturday, November 21, 2026

ಪ್ರಾಯೋಗಿಕ ಆವೃತ್ತಿ

ಮುಂಗಾರಿನ ಅಬ್ಬರ | 100 ಅಡಿ ದಾಟಿದ ಕೃಷ್ಣರಾಜಸಾಗರ ಅಣೆಕಟ್ಟೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ-ಮೈಸೂರು ಸೇರಿದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಅಣೆಕಟ್ಟೆಯ ನೀರಿನ ಮಟ್ಟ 100 ಅಡಿಯನ್ನು ದಾಟಿದೆ.

ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ ಐದಾರು ದಿನಗಳಲ್ಲೇ ಕಾವೇರಿ ಕಣಿವೆಯ ಕೇರಳದ ವಯನಾಡು, ಕೊಡಗಿನ ಕಾವೇರಿ ನದಿ ಪಾತ್ರದಲ್ಲಿ ವ್ಯಾಪಕ ಮಳೆ ಸುರಿದಿದೆ, ಇದರಿಂದಾಗಿ ಕೆ.ಆರ್.ಎಸ್ ಅಣೆಕಟ್ಟೆಯ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿತ್ತು.

ಕಳೆದ ಆರೇಳು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರದಿಂದ ಆರ್ಭಟಿಸಿದ್ದು ಕಾವೇರಿ ನದಿಯ ಜೀವಕಳೆ ಪಡೆದು ತುಂಬಿಹರಿಸುತ್ತಿದೆ. ಮೇ 30 ಬೆಳಿಗ್ಗೆ 8 ಗಂಟೆಯ ವೇಳೆಗೆ ಅಣೆಕಟ್ಟೆಯ ನೀರಿನ ಮಟ್ಟ 100.10 ಅಡಿಗೆ ಏರಿಕೆಯಾಗಿದೆ.

ಇಂದಿನ ಕೆಆರ್‌ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 100.10 ಅಡಿ.
ಒಳ ಹರಿವು – 19,448 ಕ್ಯೂಸೆಕ್
ಹೊರ ಹರಿವು – 670 ಕ್ಯೂಸೆಕ್
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 22.888 ಟಿಎಂಸಿ

ರೈತರಲ್ಲಿ ನಿರೀಕ್ಷೆ ಮೂಡಿಸಿದ ಮುಂಗಾರು 

ಈ ಬಾರಿ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳ ಮೂರನೇ ವಾರದವರೆಗೆ ಬೇಸಿಗೆ ಬಿಸಿಲಿನ ಝಳ ಗರಿಷ್ಟ ಮಟ್ಟದಲ್ಲಿತ್ತು, ಇದರಿಂದಾಗಿ ಈ ಬಾರಿ ಮಳೆಯಾಗುವುದೋ ಇಲ್ಲವೋ ಎಂಬ ಅನುಮಾನ ರೈತರಲ್ಲಿ ಮನೆ ಮಾಡಿತ್ತು. ಆದರೆ ಹವಾಮಾನ ಇಲಾಖೆಯು ಈ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಅಂದರೆ ಶೇ.100.05 ಮಳೆಯಾಗಲಿದೆ ಎಂದು ಮಾಹಿತಿ ನೀಡಿತ್ತು.

ಪ್ರತಿ ಬಾರಿ ಜೂನ್ 1ಕ್ಕೆ ಕರ್ನಾಟಕ ಪ್ರವೇಶ ಮಾಡುವಮುಂಗಾರು ಮಳೆ ಈ ವರ್ಷ ಮೇ 24ಕ್ಕೆ ರಾಜ್ಯಕ್ಕೆ ಎಂಟ್ರಿ ಕೊಟ್ಟು ತಮ್ಮ ಅಬ್ಬರ ತೋರುವ ಮೂಲಕ ರೈತರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ