Friday, November 20, 2026

ಪ್ರಾಯೋಗಿಕ ಆವೃತ್ತಿ

ಖ್ಯಾತ ಸಾಹಿತಿ ಡಾ.ಹೆಚ್.ಎಸ್.ವೆಂಕಟೇಶ ಮೂರ್ತಿ ನಿಧನ

ಕನ್ನಡದ ಖ್ಯಾತ ಸಾಹಿತಿ ಡಾ ಹೆಚ್ ಎಸ್ ವೆಂಕಟೇಶ ಮೂರ್ತಿ (80) ಬೆಂಗಳೂರಿನ ಕೆಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.

ಡಾ.ಹೆಚ್.ಎಸ್. ವೆಂಕಟೇಶಮೂರ್ತಿ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. ಅವರು 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಎಚ್ಎಸ್‌ವಿ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದಿದ್ದಾರೆ.

ಡಾ ಹೆಚ್ ಎಸ್ ವೆಂಕಟೇಶ ಮೂರ್ತಿಯವರು ನವೋದಯ ಕಾಲದ ಬರಹಗಾರರು ಮತ್ತು ಭಾವಗೀತೆ ಕವಿಯಾಗಿದ್ದವರು. 2020 ರ ಹೊತ್ತಿಗೆ, ಅವರು ಕನ್ನಡದಲ್ಲಿ 100 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರ “ಹೂವಿ” ನಾಟಕವನ್ನು ಭಾರತದಲ್ಲಿ ICSE ಶೈಕ್ಷಣಿಕ ಮಂಡಳಿಯು 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕವಾಗಿ ಗುರುತಿಸಿದೆ.

ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. “ಕನ್ನಡದಲ್ಲಿ ಕಥನ ಕವನಗಳು” ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಕಲಬುರ್ಗಿಯಲ್ಲಿ ನಡೆದ ೮೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಅವರು ಸಾಹಿತ್ಯದ ಜೊತೆಗೆ ಸುಗಮಸಂಗೀತ, ಕಿರುತೆರೆ ಹಾಗೂ ಚಲನಚಿತ್ರ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದರು.

ವೆಂಕಟೇಶ್ ಮೂರ್ತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ