ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ರೋಗಿಗಳಿಗೆ ಅಗ್ಗದ ದರದಲ್ಲಿ ಔಷಧಿಗಳು ಸಿಗುತ್ತಿದ್ದ ಜನೌಷಧಿ ಕೇಂದ್ರಗಳನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದ್ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ನೂರಾರು ಬಿಜೆಪಿ ಕಾರ್ಯಕರ್ತರು ಇಂದು ಮಂಡ್ಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿಯಾಗಿದೆ. ಕಡಿಮೆ ದರದಲ್ಲಿ ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗಳಿಗೆ ಜನ ಔಷಧಿ ಕೇಂದ್ರದಿಂದ ಉತ್ತಮ ಔಷಧಿಗಳನ್ನ ಕಡಿಮೆ ಬೆಲೆಗೆ ನೀಡಲಾಗುತ್ತಿತ್ತು. ಅಂತಹ ಕೇಂದ್ರಗಳನ್ನು ರಾಜ್ಯ ಸರ್ಕಾರ ಬಂದ್ ಮಾಡಲು ಹೊರಟಿರುವುದು ನಿಜಕ್ಕೂ ನೋವಿನ ಸಂಗತಿ. ಕೂಡಲೇ ಜನೌಷಧಿ ಕೇಂದ್ರಗಳನ್ನು ಪ್ರಾರಂಭ ಮಾಡಬೇಕು ಹಾಗೂ ಹೊಸ ಜನೌಷಧಿ ಕೇಂದ್ರಗಳನ್ನು ತೆರೆಯಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಸಿದ್ದರಾಮಯ್ಯ, ಸದಾನಂದಗೌಡ, ಸಿ.ಟಿ.ಮಂಜುನಾಥ್, ವಸಂತ್ ಕುಮಾರ್, ರಮೇಶ್, ಹರ್ಷ ಮತ್ತಿತರರಿದ್ದರು.




