Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಕಪ್ಪುಪಟ್ಟಿ ಧರಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕೈಗೆ ಕಪ್ಪುಪಟ್ಟಿ ಧರಿಸಿ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.

ನಂತರ ಮಾತನಾಡಿದ ಬಿಜೆಪಿ ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಎಚ್.ಆರ್.ಅಶೋಕ್ ಕುಮಾರ್ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ನೆರವಾಗುವ ಉದ್ದೇಶದಿಂದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ತೆರೆದಿರುವ ಜನಔಷಧ ಕೇಂದ್ರಗಳನ್ನು ಮುಚ್ಚಿಸುವಂತೆ ರಾಜ್ಯ ಸರ್ಕಾರ ಅದೇಶ ಮಾಡಿರುವುದು ಜನವಿರೋಧಿ ನೀತಿಯಾಗಿದೆ. ರಾಜ್ಯ ಸರ್ಕಾರ ಜನಔಷಧ ಕೇಂದ್ರವನ್ನು ಮುಚ್ಚುವಂತೆ ಆದೇಶಿಸುವ ಮೂಲಕ ಬಡ ಜನರನ್ನು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಕಿಡಿಕಾರಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್.ಕೃಷ್ಣ ಮಾತನಾಡಿ, ಬಡ ಜನರಿಗೆ ಕಡಿಮೆ ಅವಧಿಯಲ್ಲಿ ಸುಲಭವಾಗಿ ಸಿಗುವಂತೆ ಕೇಂದ್ರಸರ್ಕಾರ ಜನಔಷಧ ಅಂಗಡಿಯನ್ನು ಆರಂಭಿಸಲಾಗಿತ್ತು. ಜನಪರ ಕಾರ್ಯಕ್ರಮಗಳನ್ನು ಸಹಿಸದ ಮುಚ್ಚಿಸುವ ಅದೇಶ ಹೊರಡಿಸುವುದು ಸರಿಯಲ್ಲ, ಕೂಡಲೇ ಅದೇಶವನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.

ಮುಖಂಡ ಯಮದೂರು ಸಿದ್ದರಾಜು ಮಾತನಾಡಿ, ಹೆಚ್ಚು ಹಣಕೊಟ್ಟು ಔಷಧವನ್ನು ಕೊಂಡುಕೊಳ್ಳಲು ಸಾಧ್ಯವಾಗದೇ ಪರಿತಪ್ಪಿಸುವ ಕೂಲಿ ಮಾಡುವ ಗ್ರಾಮೀಣ ಜನರಿಗೆ ಜನ ಔಷಧ ಕೇಂದ್ರ ಸಹಕಾರಿಯಾಗಿತ್ತು. ಸಕ್ಕರೆ ಖಾಯಿಲೆ, ಬಿಪಿ, ಉಸಿರಾಟದ ಸಮಸ್ಯೆ ಸೇರಿದಂತೆ ಅನೇಕ ರೋಗಗಳಿಗೆ ಕಡಿಮೆ ದರದಲ್ಲಿ ಕೇಂದ್ರ ಸರ್ಕಾರ ಔಷಧಿಗಳನ್ನು ನೀಡುತ್ತಿದೆ. ರಾಜ್ಯ ಸರ್ಕಾರ ನಿರ್ಧಾರದಿಂದ ಬಡ ಜನರಿಗೆ ಹೊರೆಯಾಗಿದೆ ಎಂದು ಕಿಡಿ ಕಾರಿದರು.

ಪ್ರತಿಭಟನೆಯಲ್ಲಿ ನಗರ ಘಟಕದ ಅಧ್ಯಕ್ಷ ವೇಣು, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮೋಹನ್, ಮುಖಂಡರಾದ ಅಪ್ಪಾಜಿಗೌಡ, ಮಧು ಗಂಗಾಧರ್, ಶಿವಲಿಂಗಸ್ವಾಮಿ, ಎನ್.ಕೆ.ಕುಮಾರ್, ಚಿಕ್ಕಣ್ಣ, ನಾಗೇಗೌಡ, ದೇವರಾಜು, ಆನಂದ್ ಪಾಲ್ಗೋಂಡಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ