Tuesday, November 24, 2026

ಪ್ರಾಯೋಗಿಕ ಆವೃತ್ತಿ

ಲೋಕಾಯುಕ್ತ ದಾಳಿ | ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಭೇಟೆ

ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರ ದಾಳಿ ಮುಂದುವರಿದಿದೆ. ಶನಿವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆಯೇ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಅವರ ಮನೆ, ಕಚೇರಿ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗಂಗಾಧರ್ ಮನೆ, ಕಚೇರಿಗಳ ಮೇಲೆ ಅವರ ಅಳಿಯ, ಭಾವನ ಮನೆ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ ಪಿ ಹಣಮಂತರಾಯ ನೇತೃತ್ವದಲ್ಲಿ ದಾಳಿ ನಡೆದಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ, ಹಾವೇರಿ ಜಿಲ್ಲೆಯಲ್ಲಿ ಕೂಡ ಲೋಕಾಯುಕ್ತ ದಾಳಿ ನಡೆದಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ