Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಬಡ್ತಿ ಮೀಸಲಾತಿಗಾಗಿ ಹೋರಾಟ ಆರಂಭಿಸಿ : ಎಲ್.ಸಂದೇಶ್

ಸರ್ಕಾರಿ ನೌಕರರು ಒಂದೇ ವೇದಿಕೆಯಲ್ಲಿ ಸಂಘಟಿತರಾಗಿ ಬಡ್ತಿ ಮೀಸಲಾತಿಯಂತಹ ಹೋರಾಟವನ್ನು ಆರಂಭಿಸಬೇಕು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್. ಸಂದೇಶ್ ಸಲಹೆ ನೀಡಿದರು.

ಕುಂಬಾರರ ಜಾಗೃತಿ ವೇದಿಕೆ ವತಿಯಿಂದ ಮಂಡ್ಯ ನಗರದ ಕುಂಬಾರರ ವಿದ್ಯಾರ್ಥಿ ನಿಲಯದಲ್ಲಿ ನಡೆದ ವಿವಿಧ ಇಲಾಖೆಯ ನಿವೃತ್ತ ನೌಕರರನ್ನು ಸನ್ಮಾನಿಸಿ ಮಾತನಾಡಿದ ಅವರು, ಹಿಂದುಳಿದ ಸಮುದಾಯದ ಸರ್ಕಾರಿ ನೌಕರರು ಅತ್ಯಂತ ಶ್ರದ್ದೆ ಮತ್ತು ನಿಷ್ಠೆಯಿಂದ ಕಾಯ ನಿರ್ವಹಿಸುತ್ತಿದ್ದು, ಇದುವರೆಗೆ ಸಮುದಾಯವಾರು ನೌಕರರ ಸಂಘಟನೆಯಾಗಿದೆಯೇ ವಿನಃ ಹಿಂದುಳಿದ ವರ್ಗದ ಹೆಸರಿನಲ್ಲಿ ಸಂಘಟನೆಯಾಗಿಲ್ಲ ಎಂದು ವಿಷಾದಿಸಿದರು.

ತಮ್ಮ ಹಕ್ಕುಗಳನ್ನು ಪಡೆಯಲು ಜಾತಿವಾರು ಸಂಘಟನೆಗಿಂತ ವರ್ಗವಾರು ಸಂಘಟನೆಯಲ್ಲಿ ತೊಡಗಿ ಕೊಳ್ಳುವುದು ಉತ್ತಮವಾಗಿದೆ. ಜೊತೆಗೆ ಇಲಾಖೆಯ ಪ್ರಗತಿ ಮತ್ತು ಜನಸ್ಪಂದನೆಯ ನಿಟ್ಟಿನಲ್ಲಿ ನಿರಂತರವಾಗಿ ಕಾನ್ನೋನ್ಮುಖರಾಗಬೇಕೆಂದು ಸಲಹೆ ನೀಡಿದರು.

ಕುಂಬಾರರ ಜಾಗೃತಿ ವೇದಿಕೆ ಅಧ್ಯಕ್ಷ ಎಂ. ಕೃಷ್ಣ ಮಾತನಾಡಿ, ಸರ್ಕಾರಿ ನೌಕರರು ನಿವೃತ್ತಿಯ ನಂತರ ಸಮಾಜಮುಖೀ ಕಾವ್ಯಗಳಲ್ಲಿ ತೊಡಗಿಸಿಕೊಂಡು ತಮ್ಮ ಆರೋಗ್ಯ ಮತ್ತು ಸಮಾಜದ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರತಿಪಾದಿಸಿದರು.

ಕುಂಬಾರ ಸಮುದಾಯದ ಮುಖಂಡರಾದ ಪ್ರದೀಪ್, ಕೆರಗೋಡು ವೆಂಕಟೇಶ್, ಮಂಚಶೆಟ್ಟಿ, ಆನಂದ್, ಭೈರಶೆಟ್ಟಿ, ಅರ್ಕೇಶ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ