Thursday, November 19, 2026

ಪ್ರಾಯೋಗಿಕ ಆವೃತ್ತಿ

ಕಾಲ್ತುಳಿತದಲ್ಲಿ ಹಲವರ ಸಾವು | ಪೂರ್ವ ಸಿದ್ದತೆ ಇಲ್ಲದಿರುವುದೇ ದುರಂತಕ್ಕೆ ಕಾರಣವೆಂದ HDK

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ. ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಸರಕಾರವೇ ಹೊತ್ತುಕೊಳ್ಳಬೇಕು ಎಂದಿದ್ದಾರೆ.

ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು. ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ.  ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಅವರು ಮನವಿ ಮಾಡಿದ್ಧಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ