Sunday, November 22, 2026

ಪ್ರಾಯೋಗಿಕ ಆವೃತ್ತಿ

ದಲಿತನ ಸಜೀವ ದಹನ ಪ್ರಕರಣ | ಪೊಲೀಸ್ ಅಧಿಕಾರಿಗಳು, ಸಮಾಜ ಕಲ್ಯಾಣಾಧಿಕಾರಿ ಅಮಾನತ್ತಿಗೆ ಒತ್ತಾಯ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಯುವಕ ಸಾವಿನ ಪ್ರಕರಣದಲ್ಲಿ ಲೋಪವೆಸಗಿದ ೪ ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ್ ಅವರನ್ನು ಅಮಾನತು ಮಾಡಿ, ಪ್ರಕರಣದ ತನಿಖೆ ಕೈಗೊಳ್ಳಬೇಕು ಎಂದು ನಾವು ದ್ರಾವಿಡ ಕನ್ನಡಿಗರು ಚಳುವಳಿಯ ಅಬಿಗೌಡ ಆಗ್ರಹಿಸಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ಸಂಬಂಧ ಪೊಲೀಸ್ ಸಿಬ್ಬಂದಿಗಳ ಲೋಪವಿರುವುದಾಗಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅವರನ್ನು ಅಮಾನತು ಮಾಡಲು ಏಕೆ ಮೀನಾಮೇಷ ತೋರುತ್ತಿದ್ದಾರೆಂದರು.

ಸಾವಿಗೀಡಾದ ಜಯಕುಮಾರ್ ಹಿಂದಿನ ದಿನವೇ ಪೊಲೀಸರಿಗೆ ದೂರು ನೀಡಿದ್ದು, ಕ್ರಮ ವಹಿಸದ ಕೆ.ಆರ್.ಪೇಟೆ ಪೊಲೀಸ್ ಠಾಣೆಯ ಸಿಐ ಆನಂದೇಗೌಡ, ದಪೇದಾರ್ ವೈರಮುಡಿ, ಎಸ್‌ಐ ಸುಬ್ಬಯ್ಯ, ಡಿವೈಎಸ್ಪಿ ಚಲುವರಾಜು ವಿರುದ್ಧ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದಾರೆ ಹೊರತು ಕ್ರಮ ವಹಿಸುತ್ತಿಲ್ಲ ಎಂದು ದೂರಿದರು.

ಅಲ್ಲದೇ ಶವ ಪರೀಕ್ಷೆಯ ನಂತರ ಪರಿಹಾರ ನೀಡಿ ಕೈತೊಳೆದುಕೊಳ್ಳುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ್ ಶವವನ್ನು ಹೂಳುವ ಬದಲಿಗೆ ಸುಡುವಂತೆ ಕ್ರಮ ವಹಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೇ ಪರೀಕ್ಷೆಗೆ ಅವಶ್ಯಕತೆಗೆ ಶವ ದೊರೆಯದಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಐದು ಅಧಿಕಾರಿಗಳನ್ನೇ ಪ್ರಕರಣದ ತನಿಖೆಗೆ ನೇಮಿಸಿದ್ದೂ ಕೂಡಲೇ ಈ ಐವರನ್ನೂ ಅಮಾನತು ಮಾಡು ಪಾರದರ್ಶಕ ತನಿಖೆ ನಡೆಯಲು ಕ್ರಮವಹಿಸಬೇಕು. ಇಲ್ಲವಾದಲ್ಲಿ ಜೂನ್ ೦೯ರಿಂದ ಪ್ರಕರಣ ಸಂಬಂಧ ನಿರಂತರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಎಂ.ವಿ.ಕೃಷ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ