Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕನ್ನಲಿ ಗ್ರಾಮದಲ್ಲಿ ಚಿರತೆ ದಾಳಿಗೆ ಹಸು ಬಲಿ

ಮಂಡ್ಯ ತಾಲ್ಲೂಕಿನ ಕನ್ನಲಿ ಗ್ರಾಮದಲ್ಲಿ ಮನೆ ಮುಂದೆ ಕಟ್ಟಿ ಹಾಕಲಾಗಿದ್ದ ಹಸುವನ್ನು ಚಿರತೆಯೊಂದು ಎಳೆದೊಯ್ದು ತಿಂದು ಹಾಕಿರುವ ಗುರುವಾರ ತಡ ರಾತ್ರಿ ನಡೆದಿದೆ.

ಕೋಮಲ ಕೆ.ಸಿ ಎಂಬುವವರಿಗೆ ಸೇರಿದ ಹಸು ಚಿರತೆ ದಾಳಿಗೆ ಬಲಿಯಾಗಿದೆ. ಶುಕ್ರವಾರ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಹಸುವಿನ ಮೃತ ದೇಹ ಗದ್ದೆಯಲ್ಲಿ ಪತ್ತೆಯಾಗಿದೆ.

ಕಳೆದ ಹಲವಾರು ತಿಂಗಳಿನಿಂದ ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದೆ. ಬೋನು ಹಾಕಿ ಚಿರತೆ ಹಿಡಿದರೂ ಮತ್ತೆ ಚಿರತೆ ಕಾಣಿಸಿಕೊಳ್ಳುತ್ತಿವೆ. ಹಾಗಾಗಿ ಜನರು ಜೀವಭಯದಲ್ಲಿಯೇ ಗದ್ದೆ ಬಯಲಿಗೆ ಹೋಗುವಂತಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದು, ಚಿರತೆ ಹಿಡಿಯಲು ಬೋನ್ ಅಳವಡಿಸಲು ಮುಂದಾಗಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ