Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಒದಗಿಸಿ: ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭವಾಗಲಿದ್ದು, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜದ ತೊಂದರೆ ಉಂಟಾಗದಂತೆ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಮಳೆ ಉಂಟಾದ ಸಂದರ್ಭದಲ್ಲಿ ಗ್ತಾಮೀಣ ಪ್ರದೇಶದಲ್ಲಿ ರಸ್ತೆಗಳು ಸಣ್ಣ ಪುಟ್ಟ ದುರಸ್ತಿಯಾಗಬೇಕಿರುತ್ತದೆ. ಅವುಗಳ ಬಗ್ಗೆ ಶೀಘ್ರವಾಗಿ ಕ್ರಮ ವಹಿಸಿ ಎಂದರು.

ಮನೆ ಹಾನಿಯಾದ ಸಂದರ್ಭದಲ್ಲಿ ಅವರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ವಸತಿ ಒದಗಿಸಲು ಅವಕಾಶ ಇದ್ದಲ್ಲಿ ಆದ್ಯತೆ ನೀಡಿ ಎಂದರು.

ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಕರಿಗೆ ಸ್ಪಂದಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿದ್ದು, ರೈತರ ತೊಂದರೆಗಳಿಗೆ ಸ್ಪಂದಿಸಬೇಕು. ಯಾವುದಾದರೂ ತೊಂದರೆ ಉಮಟಾದ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿ ಇಲ್ಲದಿರುವುದು ಕಂಡುಬಂದಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ರೈತರಿಗೆ ಡಿ.ಎ.ಪಿ ರಸಗೊಬ್ಬರದ ಪರ್ಯಾಯವಾಗಿ ಹಸಿರೆಲೆ ಗೊಬ್ಬರವನ್ನು ಬಳಕೆ ಮಾಡುವ ಬಗ್ಗೆ ಅರಿವು ಮೂಡಿಸಿ. ಡಿ.ಎ.ಪಿ ಗೊಬ್ಬರದ ಅತಿಯಾದ ಬಳಕೆಯಿಂದ ಮಣ್ಣಿನ ಪೌಷ್ಠಿಕಾಂಶ ಕಡಿಮೆಯಾಗಿ ಇಳುವರಿ ಕಡಿಮೆಯಾಗುತ್ತದೆ ಎಂದರು.

ಮಣ್ಣಿನ ಪರೀಕ್ಷೆ ಮಾಡಿಸಿ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ  ಮಾತನಾಡಿ ಹೋಬಳಿವಾರು ಕೆಲವು ಗ್ರಾಮಗಳಲ್ಲಿ ಮಣ್ಣಿನ ಪರೀಕ್ಷೆ ಮಾಡಿಸಿ ರೈತರಿಗೆ ಅದರ ಅನುಗುಣವಾಗಿ ಬೆಳೆ ಬೆಳೆಯುವ ಬಗ್ಗೆ ಉತ್ತೇಜನೆ ನೀಡಿ. ಕೃಷಿ ಹಾಗೂ ಕೃಷಿ ಸಂಬಂಧಿಸಿದ ಇಲಾಖೆಗಳು ನಡೆಸುವ ಕಾರ್ಯಕ್ರಮಗಳಲ್ಲಿ ಡಿ.ಎ.ಪಿ ರಸಗೊಬ್ಬರದ ಪರ್ಯಾಯವಾಗಿ ಬೇರೆ ಗೊಬ್ಬರ ಬಳಸುವ ಬಗ್ಗೆ ತಿಳಿಸಿ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಮಾತನಾಡಿ ಜಿಲ್ಲೆಯಲ್ಲಿ ಮಳೆಯ‌ ಪರಿಸ್ಥಿತಿ, ಮಳೆಯಿಂದ ಉಂಟಾಗಿರುವ ಬೆಳೆ, ಮನೆ ಹಾಗೂ ಪ್ರಾಣ ಹಾನಿ ಹಾಗೂ ಪಾವತಿಯಾಗಿರುವ ಪರಿಹಾರದ ಬಗ್ಗೆ, ಬೆಳೆ ಪರಿಸ್ಥಿತಿ, ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಬೆಳೆ ವಿಮೆಯ ಬಗ್ಗೆ ವಿವರಿಸಿದರು.

ಉಪಮುಖ್ಯಮಂತ್ರಿಗಳ ಗಮನಕ್ಕೆ‌

ಕಾವೇರಿ ಆರತಿ ಕೆ.ಆರ್.ಎಸ್ ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸಮೆಂಟ್ ಪಾಕ್೯ ಪ್ರಾರಂಭಿಸುವ ಬಗ್ಗೆ ಇಂದು ರೈತ ಸಂಘಟನೆಗಳು ನೀಡಿರುವ ಅಭಿಪ್ರಾಯಗಳನ್ನು  ಉಪಮುಖ್ಯಮಂತ್ರಿಗಳ ಗಮನಕ್ಕೆ‌ ತರಲಾಗುವುದು ಎಂದು ಜಿಲ್ಲಾ ಉಸ್ತುವರಿ ಸಚಿವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಂಗಾರು ಹಂಗಾಮಿಗೆ ಸಂಬಂಧಿಸಿದ ಬೆಳೆ ವಿಮೆ ಪೋಸ್ಟರ್ ನ್ನು ಬಿಡುಗಡೆ ಮಾಡಿದರು.

ಸಭೆಯಲ್ಲಿ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ‌ ದರ್ಶನ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಮೈ ಶುಗರ್ ಅಧ್ಯಕ್ಷ ಗಂಗಾಧರ್, ಉಪ ಮುಖ್ಯಮಂತ್ರಿಗಳ ತಾಂತ್ರಿಕ ಸಲಹೆಗಾರ ಕೆ. ಜಯಪ್ರಕಾಶ್, ಕಾ.ನೀ.ನಿ.ನಿ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ