Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಹೇಬಿಟೇಟ್ ಸೆಂಟರ್ ಪಾಲಿ ಕ್ಲಿನಿಕ್ ಕಟ್ಟಡಕ್ಕೆ ಗುದ್ದಲಿ ಪೂಜೆ

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 40 ಲಕ್ಷ ರೂ ವೆಚ್ಚದ ಕರ್ನಾಟಕ ಸ್ಟೇಟ್ ಹೇಬಿಟೇಟ್ ಸೆಂಟರ್ ಪಾಲಿ ಕ್ಲಿನಿಕ್ ಕಟ್ಟಡದ ಗುದ್ದಲಿ ಪೂಜೆಯನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ನರೇಂದ್ರಸ್ವಾಮಿ ನೆರವೇರಿಸಿದರು.

ಮಳವಳ್ಳಿ ಪಟ್ಟಣದ ಪಶು ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಸ್ಟೇಟ್ ಹ್ಯಾಬಿಟೇಟ್ ಸೆಂಟರ್ ವತಿಯಿಂದ ನಿರ್ಮಿಸುತ್ತಿರುವ ಪಾಲಿ ಕ್ಲಿನಿಕ್ ಕಟ್ಟಡದ ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿದ ಅವರು, ಪಶು ಆಸ್ಪತ್ರೆಯಲ್ಲಿ ಆಧುನಿಕ ಚಿಕಿತ್ಸಾ ಯಂತ್ರೋಪಕರಣಗಳೊಂದಿಗೆ ತಜ್ಞ ವೈದ್ಯರ ತಂಡವು ಕಾರ್ಯನಿರ್ವಹಿಸಲಿದ್ದು, ರೈತರಿಗೆ ವರದಾನವಾಗಲಿದೆ ಎಂದು ಹೇಳಿದರು.

ದೊಡ್ಡ ರಾಸುಗಳ ತಪಾಸಣೆಗಾಗಿ ಅಲ್ಟ್ರಾ ಸೋನೋಗ್ರಾಫಿ, ಪ್ರಾಣಿಗಳ ದೇಹದಲ್ಲಿ ನೋವಿನ ನಿಖರ ತಿಳಿಯಲು ಎಕ್ಸರೇ ಯಂತ್ರ, ಗರ್ಭಧಾರಣಿಗಾಗಿ ಆಧುನಿಕ ಉಪಕರಣ, ಸೇರಿದಂತೆ ವಿಶೇಷ ಆಧುನಿಕ ಯಂತ್ರಗಳ ಸೌಲಭ್ಯವಿದ್ದು, ರೈತರು ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಮನ್ಮುಲ್ ನಿರ್ದೇಶಕ ಆರ್.ಎನ್ ವಿಶ್ವಾಸ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಿವಾಸ್, ಪಶು ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಪುರಸಭೆ ಸದಸ್ಯರಾದ ಆನಂದ್, ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಪಿ ರಾಜು, ದೊಡ್ಡಯ್ಯ ಸೇರಿದಂತೆ ಇತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ