Monday, November 23, 2026

ಪ್ರಾಯೋಗಿಕ ಆವೃತ್ತಿ

ಇಂದಿನಿಂದ ಮುಂಗಾರು ಅಬ್ಬರ ಶುರು : ರಾಜ್ಯದ 28 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಮುಂಗಾರು ಮಳೆ ಇಂದಿನಿಂದ ಚುರುಕುಗೊಂಡಿದ್ದು ರಾಜ್ಯದ ವಿವಿಧೆಡೆ ಸೋಮವಾರದಿಂದ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

28 ಜಿಲ್ಲೆಗಳಿಗೆ ‘ಯಲ್ಲೊ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದ್ದು ಮೂರು ದಿನಗಳ ಬಳಿಕ ಮಳೆ ಹೆಚ್ಚಾಗಲಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೆ ‘ಯಲ್ಲೊ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವೆಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರ ಈ ಜಿಲ್ಲೆಗಳಿಗೂ ‘ಯಲ್ಲೂ ಅಲರ್ಟ್ ಘೋಷಿಸಲಾಗಿದೆ. ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆ ನಿರೀಕ್ಷೆ ಮಾಡಲಾಗಿದೆ

ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮಂಡ್ಯ ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ ಮತ್ತು ಕೋಲಾರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಯಾದಗಿರಿ ಜಿಲ್ಲೆಯ ಹಲವೆಡೆ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ