Sunday, November 22, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಕಾರು ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ ಗಾಯ

ಅತಿ ವೇಗದಿಂದ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ವಾಹನಗಳಿಗೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಕಳೆದ ರಾತ್ರಿ 9.45 ರ ಸುಮಾರಿಗೆ ಮದ್ದೂರು ತಾಲ್ಲೂಕಿನ ನಿಡಘಟ್ಟ ಬಳಿಯ ಅಗರಲಿಂಗನದೊಡ್ಡಿ ಬಳಿ ಸಂಭವಿಸಿದೆ.

ಬೆಂಗಳೂರಿನ ಕಡೆಯಿಂದ ಅತಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಬೆಂಗಳೂರಿನ ಕಡೆ ಹೋಗುತ್ತಿದ್ದ ಇನ್ನೋವಾ ಹಾಗೂ ಟೊಯೋಟಾ ಇಟಿಯಾಸ್ ಕಾರಿಗೆ ಗುದ್ದಿದೆ.ಇದರ ಪರಿಣಾಮ ಕಾರಿನಲ್ಲಿದ್ದ ಮಸೂದ್ ಹಾಗೂ ಅಯಾನ್ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಖುಷಿ, ಚಿಕ್ಕು. ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ದಾಟಿ ಮಂಡ್ಯದ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪತ್ಯಕ್ಷದರ್ಶಿಗಳು ತಿಳಿಸಿದ್ದು, ಗಾಯಾಳುಗಳನ್ನು ಮದ್ದೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ